ನಿಲೇಕಣಿ ಸ್ಪರ್ಧೆಗೆ ಕಾಂಗ್ರೆಸ್ನಲ್ಲೇ ವಿರೋಧ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಭಾರತೀಯ ವಿಶಿಷ್ಟ ..
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಭಾರತೀಯ ವಿಶಿಷ್ಟ ಗುರುತಿನ ಪತ್ರ ಪ್ರಾಧಿಕಾರದ ಮುಖ್ಯಸ್ಥ ನಂದನ್ ನಿಲೇಕಣಿ ಸ್ಪರ್ಧೆಗೆ ಕಾಂಗ್ರೆಸ್ನಲ್ಲೇ ವಿರೋಧ ವ್ಯಕ್ತವಾಗಿದೆ.
ಬೆಂಗಳೂರು ದಕ್ಷಿಣದಿಂದ ನಂದನ್ ನಿಲೇಕಣಿ ಅವರಿಗೆ ಟಿಕೆಟ್ ನೀಡಬಾರದು, ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಬೆಂಗಳೂರು ನಗರ ಕಾಂಗ್ರೆಸ್ ಅಧ್ಯಕ್ಷ, ಸಚಿವ ದಿನೇಶ್ ಗುಂಡೂರಾವ್ ಹಾಗೂ ನಾಲ್ವರು ಕಾಂಗ್ರೆಸ್ ಶಾಸಕರು ಸೇರಿದಂತೆ 16 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದಾರೆ.
ನಿಲೇಕಣಿ ಬದಲಾಗಿ ಸ್ಥಳೀಯ ಪ್ರಭಾವಿ ಮುಖಂಡ ಯು.ಬಿ.ವೆಂಕಟೇಶ್ ಅವರಿಗೆ ಟಿಕೆಟ್ ನೀಡುವಂತೆ ಬೆಂಗಳೂರು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.