ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪ್ರಧಾನಿ ಅಭ್ಯರ್ಥಿ ಬದಲಿಗೆ ರಾಹುಲ್‌ಗೆ ಪ್ರಚಾರ ಸಮಿತಿಯ ಅಧ್ಯಕ್ಷ ಪಟ್ಟ

ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಘೋಷಣೆಗೆ ಸಂಬಂಧಿಸಿದಂತೆ ಗುರುವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ...

Vishwanath S
Updated On : 16 Jan 2014, 8:51 am

ನವದೆಹಲಿ: ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಘೋಷಣೆಗೆ ಸಂಬಂಧಿಸಿದಂತೆ ಗುರುವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ಅಭ್ಯರ್ಥಿ ಬದಲಿಗೆ ಕಾಂಗ್ರೆಸ್‌ನ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷತೆಯ ಪಟ್ಟ ಕಟ್ಟಲಾಗಿದೆ.

ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿಯಾನ್ನಾಗಿ ಘೋಷಿಸುವುದಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ರಾಹುಲ್‌ಗೆ ಪ್ರಧಾನಿ ಅಭ್ಯರ್ಥಿ ಪಟ್ಟ ಕಟ್ಟುವ ಬದಲಿಗೆ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕಾಂಗ್ರೆಸ್ ವಕ್ತಾರ ಜನಾರ್ದನಾ ದ್ವಿವೇದಿ ಹೇಳಿದ್ದಾರೆ.

ಕಾರ್ಯಕಾರಿ ಸಮಿತಿಯ ಸಭೆ ಬಳಿಕ ಮಾತನಾಡಿದ ಸೋನಿಯಾ ಗಾಂಧಿ ಅವರು, ಚುನಾವಣೆಗೂ ಮೊದಲೇ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಪರಿಪಾಠ ಕಾಂಗ್ರೆಸ್‌ನಲ್ಲಿ ಇಲ್ಲ. ಅಂತಹ ಸಂಪ್ರದಾಯವನ್ನು ಕಾಂಗ್ರೆಸ್ ಪಾಲಿಸುವುದಿಲ್ಲ. ಅಲ್ಲದೆ ಹಿಂದಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ನಾವು ಮುರಿಯುವುದಿಲ್ಲ ಎಂದು ಸೋನಿಯಾ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಚುನಾವಣೆ ಬಳಿಕ ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ಹೊರಲು ನಾನು ಸಿದ್ದನಾಗಿದ್ದೇನೆ. ಸದ್ಯ ಪಕ್ಷ ನನಗೆ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವತ್ತ ನಾನು ಗಮನ ಹರಿಸುತ್ತೇನೆ ಎಂದು ತಿಳಿಸಿದ್ದಾರೆ.

ಬೆಲೆ ಏರಿಕೆ, ಭ್ರಷ್ಟಾಚಾರದಿಂದಾಗಿ ದೇಶಾದ್ಯಂತ ಆಡಳಿತ ವಿರೋಧಿ ಅಲೆ ಸೃಷ್ಠಿಯಾಗಿದ್ದು, ಕಾಂಗ್ರೆಸ್‌ನ ವರ್ಚಸ್ಸೂ ಮುಂಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿನ್ನಾಗಿ ಘೋಷಿಸಿದರೆ ಮುಂಬರುವ ಚುನಾವಣೆಯಲ್ಲಿನ ಸೋಲಿನ ಹೊಣೆಯನ್ನು ರಾಹುಲ್ ಗಾಂಧಿ ಹೊರಬೇಕಾಗುತ್ತದೆ. ಇದು ರಾಹುಲ್ ಗಾಂಧಿಯ ಮುಂದಿನ ಏಳಿಗೆಗೆ ಕೊಡಲಿ ಪೆಟ್ಟು ಬೀಳಲಿದೆ ಎಂಬ ಕಾರಣದಿಂದಾಗಿ ಕಾಂಗ್ರೆಸ್ ರಾಹುಲ್ಗೆ ಪ್ರಧಾನಿ ಅಭ್ಯರ್ಥಿ ಪಟ್ಟ ಕಟ್ಟಲು ಹಿಂದೆಟ್ಟು ಹಾಕುತ್ತಿದೆ ಎನ್ನಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement