ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿನ್ನಿ ವಿರುದ್ಧ ಶಿಸ್ತು ಕ್ರಮ: ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆಮ್ ಆದ್ಮಿ ...

Mainashree
Updated On : 16 Jan 2014, 4:34 am

ಗಾಜಿಯಾಬಾದ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆಮ್ ಆದ್ಮಿ ಪಕ್ಷದ ಶಾಸಕ ವಿನೋದ್ ಕುಮಾರ್ ಬಿನ್ನಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಎಪಿ ಗುರುವಾರ ತಿಳಿಸಿದೆ.

ಇಂದು ದೆಹಲಿಯಲ್ಲಿ ಸುದ್ದಿಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಬಿನ್ನಿ, ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ಮೂಲಕ ಎಎಪಿ ತನ್ನ ಸಿದ್ಧಾಂತಗಳನ್ನು ಗಾಳಿಗೆ ತೂರಿ, ಅಡ್ಡದಾರಿ ಹಿಡಿದಿದೆ ಎಂದು ಆರೋಪಿಸಿದ್ದರು.

ಆರೋಪವನ್ನು ತಳ್ಳಿಹಾಕಿರುವ ಎಎಪಿ, ವಿನೋದ್ ಕುಮಾರ್ ಆರೋಪ ಸುಳ್ಳು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿಲ್ಲ ಎಂಬ ಕಾರಣಕ್ಕೆ ಪಕ್ಷದ ಹಾಗೂ ನಾಯಕರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಎಎಪಿ ಹಿರಿಯ ನಾಯಕ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಪಕ್ಷದ ಸದಸ್ಯರು ವಿಭಿನ್ನ ಅಭಿಪ್ರಾಯಗಳನ್ನು ಹೊಂದಿರುತ್ತಾರೆ, ಆದರೆ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡುವವರನ್ನು ಸುಮ್ಮನೇ ಬಿಡುವುದಿಲ್ಲ. ಬಿನ್ನಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ಸಂಬಂಧ ನೋಟೀಸ್ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕೇಜ್ರಿವಾಲ್ ದೆಹಲಿ ಜನತೆಗೆ ಸುಳ್ಳು ಭರವಸೆಗಳನ್ನು ನೀಡಿ, ದಿಕ್ಕುತಪ್ಪಿಸುತ್ತಿದ್ದಾರೆ. ಅವರೊಬ್ಬ ಮಹಾನ್ ಸುಳ್ಳುಗಾರ ಎಂದು ಬಿನ್ನಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement