ಮುಷರಫ್ಗೆ ಅಮೆರಿಕದಲ್ಲಿ ಹೆಚ್ಚಿನ ಚಿಕಿತ್ಸೆ?
ಪಾಕಿಸ್ತಾನ ಸೇನೆಯ ಮಾಜಿ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರ ಅನಾರೋಗ್ಯ ಸುಧಾರಿಸದ ಕಾರಣ...
ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ ಮಾಜಿ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರ ಅನಾರೋಗ್ಯ ಸುಧಾರಿಸದ ಕಾರಣ ಅಮೆರಿಕದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಮುಷರಫ್ ಪರ ವಕೀಲ ಇಂದು ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.
ವಿಚಾರಣೆಗಾಗಿ ವಿಶೇಷ ನ್ಯಾಯಾಲಯಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯದಲ್ಲಿ ಅವರು ಹೃದಯ ಸಮಸ್ಯೆ ಎಂದು ಹೇಳಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮುಷರಫ್ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿಯಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾಕಿಸ್ತಾನ ಸೇನಾ ವೈದ್ಯರು ಪರೀಕ್ಷಿಸುತ್ತಿದ್ದರು. ಆದರೆ ಮುಷರಫ್ ಆರೋಗ್ಯ ಸುಧಾರಿಸದ ಕಾರಣ ವೈದ್ಯರು ಅಮೆರಿಕದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಮುಷರಫ್ ಪರ ವಕೀಲರು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ನಾಳೆವರೆಗೆ ಕಾಯ್ದಿರಿಸಿದೆ.