ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಹುಲ್ ನಾಯಕತ್ವದಲ್ಲಿ ಕಾಂಗ್ರೆಸ್‌ಗೆ ಜಯ ಸಿಗಲಿದೆ: ಪ್ರಧಾನಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಜಯ ಗಳಿಸಲಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್...

Mainashree
Updated On : 17 Jan 2014, 3:09 am

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಜಯ ಗಳಿಸಲಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಶುಕ್ರವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಯ ಸಾಧಿಸಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ದೇಶ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದೀವೆಂದು ಹತಾಶೆಗೆ ಒಳಗಾಗುವುದು ಬೇಡ. ನಮಗೆ ಖಂಡಿತವಾಗಿ ಜಯ ಸಿಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಆರ್ಥಿಕತೆಯಲ್ಲಿ ಕಳೆದ 7 ವರ್ಷಗಳಿಂದ ಶೇ 8ರಷ್ಟು ದೇಶ ಅಭಿವೃದ್ಧಿ ಹೊಂದಿದೆ. ನಮ್ಮ ಸರ್ಕಾರ ಮಹಿಳೆಯರಿಗಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮೀಸಲಾತಿಯಿಂದ ಹಿಡಿದು ಹಲವು ಕ್ಷೇತ್ರದಲ್ಲಿ ಮಹಿಳೆಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

2014ರಲ್ಲಿ ಸಿಗುವ ಜಯ ರಾಹುಲ್ ಜಯವಾಗಿರುತ್ತದೆ. ರಾಹುಲ್ ದೇಶದ ಒಳ್ಳೆಯ ನಾಯಕರಾಗಿರುತ್ತಾರೆ. ರಾಹುಲ್ ಮುಂದಾಳತ್ವದಲ್ಲಿ ಕಾಂಗ್ರೆಸ್ ಕೆಲಸ ಮಾಡಲಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement