ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶಹಾಪುರ: ಗುಂಪು ಘರ್ಷಣೆಗೆ 1 ಬಲಿ, 30 ಮಂದಿಗೆ ಗಾಯ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದಲ್ಲ್ಲಿ ಶುಕ್ರವಾರ ಕ್ಷುಲ್ಲಕ..

Lingaraj Badiger
Updated On : 17 Jan 2014, 4:49 am

ಶಹಾಪುರ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದಲ್ಲ್ಲಿ ಶುಕ್ರವಾರ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 20 ಪೊಲೀಸರು ಸೇರಿದಂತೆ 30ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕನ್ಯಾಕೋಳೂರಿನಲ್ಲಿ ಇಂದು ಚೌಡೇಶ್ವರಿ ಜಾತ್ರೆ ನಡೆಯುತ್ತಿತ್ತು, ಜಾತ್ರೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ 45 ವರ್ಷದ ದೇವೇಂದ್ರಪ್ಪ ದಳಪತಿ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಇದರಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಘರ್ಷಣೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರ ಮೇಲೂ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಇನ್ಸ್‌ಪೆಕ್ಟರ್ ನ್ಯಾಮಗೌಡ ಹಾಗೂ ಪಿಎಸ್‌ಐ ದೊಡ್ಡಪ್ಪ ಸೇರಿದಂತೆ 20ಕ್ಕು ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರನ್ನು ಗುಲ್ಬರ್ಗಾದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ
ಘರ್ಷಣೆಯಲ್ಲಿ ಮೃತಪಟ್ಟ ದೇವೇಂದ್ರಪ್ಪ ದಳಪತಿ ಅವರ ಕುಟುಂಬಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಎಫ್.ಆರ್ ಜಮಾದಾರ್ ಅವರು 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಸ್ಥಳದಲ್ಲೇ 3 ಲಕ್ಷ 75 ಸಾವಿರ ರುಪಾಯಿ ಪರಿಹಾರ ನೀಡುವುದಾಗಿ ಜಮಾದಾರ್ ತಿಳಿಸಿದ್ದಾರೆ.

ಇನ್ನು ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಶಹಾಪೂರ ಶಾಸಕ ಗುರು ಪಾಟೀಲ್ ಅವರು, ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement