ಅಶೋಕ ಖೆಮ್ಕಾ ವಿರುದ್ಧ ಸಿಬಿಐ ತನಿಖೆಗೆ ಆದೇಶ
ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಅಶೋಕ್ ಖೆಮ್ಕಾ ಅವರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಹರಿಯಾಣ ಸರ್ಕಾರ...
ಚಂಡೀಗಡ್: ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಅಶೋಕ್ ಖೆಮ್ಕಾ ಅವರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಹರಿಯಾಣ ಸರ್ಕಾರ ಶನಿವಾರ ಆದೇಶಿದೆ.
ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಮತ್ತು ಡಿಎಲ್ಎಫ್ ನಡುವೆ ಭೂ ಅವ್ಯವಹಾರ ನಡೆದಿದೆ ಎನ್ನುವ ಮೂಲಕ ರಾಜಕೀಯ ರಂಗದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಯಾಣದ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೆಮ್ಕಾ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದರು.
ಗುಜರಾತ್ನಲ್ಲಿ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲು 8 ಕೋಟಿ ಲಂಚ ಪಡೆದಿರುವ ಆರೋಪದ ಮೇಲೆ ಖೆಮ್ಕಾ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ ಆದೇಶಿಸಿದೆ.