ಶಶಿ ತರೂರ್ ಆರೋಗ್ಯ ಸ್ಥಿರ
ಶುಕ್ರವಾರ ರಾತ್ರಿ ಸುನಂದಾ ಸಾವಿಗೀಡಾದ ಮರುಕದಲ್ಲಿ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ...
ನವದೆಹಲಿ: ಶುಕ್ರವಾರ ರಾತ್ರಿ ಪತ್ನಿ ಸುನಂದಾ ಪುಷ್ಕರ್ ಸಾವಿಗೀಡಾದ ಮರುಕದಲ್ಲಿ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಶಶಿ ತರೂರ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಶಿ ತರೂರ್ ಅವರನ್ನು ಎಐಐಎಂಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಸಿಕ್ಕಿದ ಮಾಹಿತಿ ಪ್ರಕಾರ ತರೂರ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.