ಖಾಸಗಿ ಬಸ್ ಪಲ್ಟಿ: ನಾಲ್ಕು ಸಾವು,
ಖಾಸಗಿ ಬಸ್ ಉರುಳಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ...
ಬೆಂಗಳೂರು: ಖಾಸಗಿ ಬಸ್ ಉರುಳಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಆಂಧ್ರಪ್ರದೇಶದ ನೆಲ್ಲೂರಿನಿಂದ ಬರುತ್ತಿದ್ದ ವೋಲ್ವೋ ಬಸ್ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಹೋಸಕೋಟೆಯ ಬಳಿ ಉರುಳಿದ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 16 ಜನರು ಗಾಯಗೊಂಡಿದ್ದಾರೆ.
ಬೆಂಗಳೂರಿನ ರಾಜೇಶ್ ಟ್ರಾವೆಲ್ಸ್‌ಗೆ ಸೇರಿದ ಬಸ್. ಬಸ್‌ನಲ್ಲಿ ಇಬ್ಬರು ಚಾಲಕರು ಸೇರಿದಂತೆ 52 ಪ್ರಯಾಣಿಕರಿದ್ದರು. ಮೃತರ ಬಗ್ಗೆ ಹೆಚ್ಚು ಮಾಹಿತಿ ತಿಳಿದು ಬಂದಿಲ್ಲ. 90 ಕಿ.ಮೀ ವೇಗದಲ್ಲಿ ಬಸ್ ಬರುತ್ತಿತ್ತು. ಈ ವೇಳೆ ಹೆದ್ದಾರಿಯಲ್ಲಿ ವ್ಯಕ್ತಿಯೊಬ್ಬ ಅಡ್ಡ ಬಂದಿದ್ದು, ಆತನನ್ನು ರಕ್ಷಿಸಲು ಹೋದಾಗ ಬಸ್ ಪಲ್ಟಿ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ.
16 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳಿಯ ಆಸ್ಪತ್ರೆ ಎಂ.ವಿ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.