ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗೋಧ್ರ ಗಲಭೆಗೆ ಮೋದಿ ಕ್ಷಮೆ ಕೇಳುವ ಅಗತ್ಯವಿಲ್ಲ: ಸಲ್ಮಾನ್ ಖಾನ್

2002ರಲ್ಲಿ ನಡೆದ ಗೋಧ್ರ ಗಲಭೆಗೆ...

Mainashree
Updated On : 20 Jan 2014, 12:57 pm

ನವದೆಹಲಿ: 2002ರಲ್ಲಿ ನಡೆದ ಗೋಧ್ರ ಗಲಭೆಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕ್ಷಮೆಯಾಚಿಸುವ ಅಗತ್ಯವಿಲ್ಲ ಎಂದು ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹೇಳಿದ್ದಾರೆ.

ಕೈಟ್ ಹಬ್ಬದಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಸಲ್ಮಾನ್ ಖಾನ್ ಅವರು ಪರಸ್ಪರ ಭೇಟಿಯಾಗಿದ್ದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಲ್ಮಾನ್, ಕೋಮುಗಲಭೆಗೆ ಮೋದಿ ಅವರು ಕ್ಷಮೆ ಕೋರುವ ಅಗತ್ಯವಿಲ್ಲ ಎಂದಿದ್ದಾರೆ.

ನ್ಯಾಯಾಂಗವೇ ಗುಜರಾತ್ ಗಲಭೆಯ ಪ್ರಕರಣದಲ್ಲಿ ಮೋದಿ ಅವರನ್ನು ನಿರಪರಾಧಿ ಎಂದು ಹೇಳಿದೆ. ಹೀಗಾಗಿ ಅವರು ಕ್ಷಮೆಯಾಚಿಸಬಾರುದು ಎಂದು ಸಲ್ಮಾನ್ ತಿಳಿಸಿದ್ದಾರೆ.

ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಮೋದಿ ಅವರ ಆಯ್ಕೆ ಸಂಬಂಧ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಲ್ಮಾನ್ ಖಾನ್, ನನ್ನ ಅಭಿಪ್ರಾಯ ನನ್ನ ಅಭಿಮಾನಿಗಳ ಮೇಲೆ ಪ್ರಭಾವ ಬೀರುವುದು ಬೇಡ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement