ದೆಹಲಿ ಪೊಲೀಸರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ: ಕೇಜ್ರಿವಾಲ್
ದೆಹಲಿ ಪೊಲೀಸರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...
ನವದೆಹಲಿ: ದೆಹಲಿ ಪೊಲೀಸರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
ಭ್ರಷ್ಟಾಚಾರದಲ್ಲಿ ತೊಡಗಿರುವ ದೆಹಲಿ ಪೊಲೀಸರು ಜನರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವೇಶ್ಯಾವಾಟಿಕೆ ಅಡ್ಡಕ್ಕೆ ಕಡಿವಾಣ ಹಾಕುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಇದನ್ನು ಪ್ರಶ್ನಿಸಿದರೇ ಅನುಚಿತವಾಗಿ ವರ್ತಿಸುತ್ತಾರೆ ಎಂದು ಅವರು ವಿಷಾಧಿಸಿದ್ದಾರೆ.
ಧರಣಿಯಲ್ಲಿ ಪಾಲ್ಗೊಳ್ಳುವಂತೆ ದೆಹಲಿ ಜನರಿಗೆ ಆಹ್ವಾನವಿತ್ತ ಕೇಜ್ರಿವಾಲ್, ಒಳ್ಳೆಯ ಪೊಲೀಸರು ಕೂಡ ಸಮವಸ್ತ್ರ ಕಳಚಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ ಎಂದು ಹೇಳಿದ್ದಾರೆ.
ದೆಹಲಿ ಪೊಲೀಸರು ಅಪರಾಧಿಗಳ ಜೊತೆ ಶಾಮೀಲಾಗಿದ್ದಾರೆ. ಅತ್ಯಾಚಾರ ಕೇಸ್ಗಳನ್ನು ಗಂಭೀರವಾಗಿ ಪರಿಗಣಿಸಲ್ಲ ಕೇಳಿದರೆ ತನಿಖೆ ಹಂತದಲ್ಲಿದೆ ಎಂದು ಹೇಳುತ್ತಾರೆ. ಇವರ ಅನುಚಿತ ವರ್ತನೆಯಿಂದ ಬೇಸರವಾಗಿದೆ. ಈ ಸಂಬಂಧ ಈಗಾಗಲೇ ಕೇಂದ್ರ ಗೃಹ ಸಚಿವರಿಗೆ ಹಾಗೂ ಉಪರಾಜ್ಯಪಾಲರಿಗೆ ಮಾಹಿತಿ ನೀಡಿದ್ದರು, ಅವರು ಸರಿಯಾಗಿ ಸ್ಪಂಧಿಸುತ್ತಿಲ್ಲ ಎಂದು ಆಪಾಧಿಸಿದ್ದಾರೆ.