ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ರಾಮನಗರದ ಚುನಾವಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು...

Vishwanath S
Updated On : 20 Jan 2014, 5:30 am

ಬೆಂಗಳೂರು: ರಾಮನಗರದ ಚುನಾವಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚುನಾವಣಾ ಆಯೋಗಕ್ಕೆ ತಪ್ಪು ಆಫಿಡವಿಟ್ ಸಲ್ಲಿಸಿದ್ದಾರೆ ಎಂದು ಸೋಮವಾರ ಪತ್ರಕರ್ತೆ ನಾಗಲಕ್ಷ್ಮೀ ಬಾಯಿ ಎಂಬುವವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ತಮ್ಮ ಮೊದಲ ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಕುಮಾರಸ್ವಾಮಿ ಅವರ ಹೆಸರಲ್ಲಿ ನಡೆಸುತ್ತಿರುವ ವ್ಯವಹಾರಗಳ ಕುರಿತಾಗಿ ಮಾತ್ರ ಅಫಿಡವಿಟ್‌ನಲ್ಲಿ ನಮೂದಿಸಿದ್ದಾರೆ. ಆದರೆ ಎರಡನೇ ಪತ್ನಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರಲ್ಲಿ ನಡೆಸುತ್ತಿರುವ ವ್ಯವಹಾರಗಳ ಕುರಿತಾಗಿ ಯಾವುದೇ ಮಾಹಿತಿಯನ್ನು ಆಫಿಡವಿಟ್‌ನಲ್ಲಿ ನಮೂದಿಸಿಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ದೂರಿದ್ದಾರೆ.

ರಾಧಿಕಾ ಅವರನ್ನು ತಮ್ಮ ಎರಡನೇ ಪತ್ನಿ ಎಂದು ಕುಮಾರಸ್ವಾಮಿ ಅವರು ಒಪ್ಪಿಕೊಂಡಿದ್ದಾರೆ. ರಾಧಿಕಾ ಅವರಿಗೆ ಎರಡನೇ ಪತ್ನಿಯ ಸ್ಥಾನವನ್ನು ನೀಡಿರುವ ಅವರು, ಇತ್ತೀಚೆಗಷ್ಟೇ ಮಗಳಾದ ಶಮಿಕಾ ಕುಮಾರಸ್ವಾಮಿಯ ಹುಟ್ಟುಹಬ್ಬವನ್ನು ಆಚರಿಸಿದ್ದರು. ಹೀಗಾಗಿ ಎರಡನೇ ಪತ್ನಿ ಆಗಿರುವ ರಾಧಿಕಾ ಕುಮಾರಸ್ವಾಮಿ ಅವರ ವ್ಯವಹಾರಗಳ ಕುರಿತಾಗಿ ಆಯೋಗಕ್ಕೆ ಅಫಿಡವಿಟ್ ಸಲ್ಲಿಸಿಲ್ಲ. ಹೀಗಾಗಿ ಹಿಂದೆ ಅವರು ಆಯೋಗಕ್ಕೆ ಸಲ್ಲಿಸಿರುವ ಆಫಿಡವಿಟ್ ತಪ್ಪು ಮಾಹಿತಿಯಿಂದ ಕೂಡಿದೆ ಎಂದರು.

ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವ ಆರೋಪದಡಿ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸುವಂತೆ ನಾಗಲಕ್ಷ್ಮೀ ಬಾಯಿ ದೂರಿನಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement