15 ಅಪರಾಧಿಗಳ ಗಲ್ಲುಶಿಕ್ಷೆ ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆ
ಗಲ್ಲುಶಿಕ್ಷೆ ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆ ಮಾಡಿದ ಸುಪ್ರೀಂ ಕೋರ್ಟ್ ವೀರಪ್ಪನ್ ನಾಲ್ವರು ಸಹಚರರಿಗೆ...
ನವದೆಹಲಿ: ಗಲ್ಲುಶಿಕ್ಷೆ ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆ ಮಾಡಿದ ಸುಪ್ರೀಂ ಕೋರ್ಟ್ ವೀರಪ್ಪನ್ ನಾಲ್ವರು ಸಹಚರರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಮಂಗಳವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ.
ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಆರೋಪಿಗಳು ಸಲ್ಲಿಸಿದ್ದ ಕ್ಷಮಾಧಾನ ಅರ್ಜಿ ವಿಲೇವಾರಿ ವಿಳಂಬ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಗಲ್ಲುಶಿಕ್ಷೆ ಮಾರ್ಪಾಟು ಮಾಡಿ ಜೀವಾವಧಿ ಶಿಕ್ಷೆ ವಿಧಿಸಿದೆ.
ಈ ಹಿನ್ನಲೆಯಲ್ಲ್ 15 ಅಪರಾಧಿಗಳ ಗಲ್ಲುಶಿಕ್ಷೆ ಜೀವಾವಧಿ ಶಿಕ್ಷೆಯಾಗಿ ಮಾರ್ಪಾಟಾಗಿದೆ. ಗಲ್ಲುಶಿಕ್ಷೆಗೆ ಗುರಿಯಾಗಿದ್ದ ವೀರಪ್ಪನ್ ನಾಲ್ವರು ಸಹಚರರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಕುಟುಂಬ ಸದಸ್ಯರ ಸಾಮೂಹಿಕ ಹತ್ಯೆ ಪ್ರಕರಣದ ಅಪರಾಧಿ ಪ್ರವೀಣ್ ಕುಮಾರ್ಗೆ ಜೀವಾವಧಿ ಶಿಕ್ಷೆಯಾಗಿದೆ. ಮೂವರು ಕುಟುಂಬ ಸದಸ್ಯರ ಹತ್ಯೆಗೈದಿದ್ದ ಅಪರಾಧದ ಮೇಲೆ ಪ್ರವೀಣ್ ಕುಮಾರ್ಗೆ ಗಲ್ಲುಶಿಕ್ಷೆ ವಿಧಿಸಲಾಗಿತ್ತು. ಮಂಗಳೂರಿನ ಮಂಜೂರಿನಲ್ಲಿ ಘಟನೆ ನಡೆದಿತ್ತು.
ಯುವತಿಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಅತ್ಯಾಚಾರಿಗಳಿಗೆ ಜೀವಾವಧಿ ಶಿಕ್ಷೆಯಾಗಿದೆ.