ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆಪ್ ಪ್ರತಿಭಟನೆ ವೇಳೆ ಘರ್ಷಣೆ; ಪೊಲೀಸರಿಂದ ಲಾಠಿ ಚಾರ್ಜ್

ಐವರು ಪೊಲೀಸರ ಅಮಾನತಿಗೆ ಆಗ್ರಹಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿ 2ನೇ ದಿನವೂ ಮುಂದುವರೆದಿದ್ದು, ಪ್ರತಿಭಟನೆ ವೇಳೆ ಪೊಲೀಸರು ಮತ್ತು...

Vishwanath S
Updated On : 21 Jan 2014, 5:18 am

ನವದೆಹಲಿ: ಐವರು ಪೊಲೀಸರ ಅಮಾನತಿಗೆ ಆಗ್ರಹಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿ 2ನೇ ದಿನವೂ ಮುಂದುವರೆದಿದ್ದು, ಪ್ರತಿಭಟನೆ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಘರ್ಷನೆ ಸಂಭವಿಸಿವೆ. ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಭ್ರಷ್ಟ ಪೊಲೀಸರನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಿನ್ನೆಯಿಂದ ರೈಲ್ ಭವನ್ ಆವರಣದಲ್ಲಿ ಧರಣಿ ನಡೆಸುತ್ತಿದ್ದರು. ಧರಣಿ ನಿರತ ಸಿಎಂಗೆ ಬೆಂಬಲ ನೀಡಲು ಅಪಾರ ಸಂಖ್ಯೆಯಲ್ಲಿ ಆಪ್ ಕಾರ್ಯಕರ್ತರು ಆಗಮಿಸುತ್ತಿದ್ದು, ಪ್ರತಿಭಟನಾ ಸ್ಥಳವನ್ನು ಸೇರಲು ಮುಂದಾದರು. ಇದನ್ನು ತಡೆಯಲು ಬಂದ ಪೊಲೀಸರು ಮತ್ತು ಆಪ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಬಲವಂತವಾಗಿ ಪ್ರತಿಭಟನಾ ಸ್ಥಳವನ್ನು ಪ್ರವೇಶವನ್ನು ಆಪ್ ಕಾರ್ಯಕರ್ತರು ಮುಂದಾದರು. ಅಲ್ಲದೆ ಪ್ರತಿಭಟನಾ ಸ್ಥಳವನ್ನು ಪ್ರವೇಶಿಸಲು ನಿಬಂರ್ಧಿಸಲು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿದ್ದಾರೆ. ಇದರಿಂದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಇದರಿಂದ ಉದ್ರಿಕ್ತಗೊಂಡ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಇದರಿಂದಾಗಿ ಹಲವು ಪೊಲೀಸರಿಗೆ ಮತ್ತು ಆಪ್ ಕಾರ್ಯಕರ್ತರಿಗೆ ಗಾಯಗಳಾಗಿವೆ.

ಈ ನಡುವೆ, ಸ್ವತಃ ಮುಖ್ಯಮಂತ್ರಿಗಳೇ ಧರಣಿ ಕೂತಿರುವುದು ಸರಿಯಲ್ಲ ಎಂದು ಹಲವು ರಾಜಕೀಯ ನಾಯಕರು ಹೇಳಿದ್ದಾರೆ. ಆಡಳಿತ ನೀಡಬೇಕಾದ ಸರ್ಕಾರವೇ ಬೀದಿಗಳಿದರೆ ಏನು ಸಾಧಿಸಿದಂತಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement