ಕೇಜ್ರಿವಾಲ್ ವಿರುದ್ಧದ ಪ್ರಕರಣ ವಿಚಾರಣೆಗೆ ಸುಪ್ರೀಂ ಅಸ್ತು
ನಿನ್ನೆಯಿಂದ ಧರಣಿ ನಡೆಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧದ ಪ್ರಕರಣ...
ನವದೆಹಲಿ: ನಿನ್ನೆಯಿಂದ ಧರಣಿ ನಡೆಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧದ ಪ್ರಕರಣ ವಿಚಾರಣಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಕೇಜ್ರಿವಾಲ್ ಅವರು ಧರಣಿ ನಡೆಸುತ್ತಿರುವುದರಿಂದ ಸಾಮಾನ್ಯ ಜನರಿಗೆ ಹೆಚ್ಚು ತೊಂದರೆಯಾಗಿದ್ದು, ಅವರ ವಿರುದ್ಧ ವಿಚಾರಣೆ ನಡೆಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿದೆ.