ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಧರಣಿ ಕೈಬಿಡುವಂತೆ ಕೇಜ್ರಿವಾಲ್‌ಗೆ ರಾಜ್ಯಪಾಲರ ಮನವಿ

ದೆಹಲಿಯ ರೈಲ್ ಭವನ್ ಆವರಣದಲ್ಲಿ ಸೋಮವಾರದಿಂದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಡೆಸುತ್ತಿರುವ ಧರಣಿ ಕೈಬಿಡುವಂತೆ ದೆಹಲಿ ರಾಜ್ಯಪಾಲ ನಜೀಬ್ ...

Vishwanath S
Updated On : 21 Jan 2014, 7:38 am

ನವದೆಹಲಿ: ದೆಹಲಿಯ ರೈಲ್ ಭವನ್ ಆವರಣದಲ್ಲಿ ಸೋಮವಾರದಿಂದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಡೆಸುತ್ತಿರುವ ಧರಣಿ ಕೈಬಿಡುವಂತೆ ದೆಹಲಿ ರಾಜ್ಯಪಾಲ ನಜೀಬ್ ಜಂಗ್ ಅವರು ಮಂಗಳವಾರ ಮನವಿ ಮಾಡಿದ್ದಾರೆ.

ಭ್ರಷ್ಟ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ಆಪ್ ನಡೆಸುತ್ತಿರುವ ಪ್ರತಿಭಟನೆ ಇಂದು ತೀವ್ರ ಸ್ವರೂಪಕ್ಕೆ ತಿರುಗಿದ್ದು, ಆಪ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿಗೆ ಕಾರಣವಾಗಿದೆ. ಪ್ರತಿಭಟನೆ ಹಿಂಸಾ ರೂಪ ಪಡೆದುಕೊಳ್ಳುತ್ತಿದ್ದು, ತಾವು ಪ್ರತಿಭಟನೆ ನಿಲ್ಲಿಸುವಂತೆ ಕೇಜ್ರಿವಾಲ್‌ಗೆ ರಾಜ್ಯಪಾಲರು ಮನವಿ ಮಾಡಿದ್ದಾರೆ.

ಧರಣಿ ನಿರತ ಸಿಎಂಗೆ ಸಾಥ್ ನೀಡಲು ಇಂದು ಸಾವಿರಾರು ಸಂಖ್ಯೆಯಲ್ಲಿ ಆಪ್ ಕಾರ್ಯಕರ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಆದರೆ ಪ್ರತಿಭಟನಾ ಸ್ಥಳವನ್ನು ಪ್ರವೇಶಿಸಲು ಪೊಲೀಸರು ಅನುಮತಿ ನೀಡದ ಕಾರಣ ಆಪ್ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿದರು. ಇದರಿಂದಾಗಿ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಸದ್ಯ ರೈಲ್ ಭವನ್ ಆವರಣದಲ್ಲಿ ಉದ್ರಿಕ್ತ ವಾತಾವರಣಾ ಸೃಷ್ಠಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement