ಬಿಜೆಪಿ ಲೋಕಸಭೆ ಟಿಕೆಟ್‌ಗಾಗಿ ಸಿಎಂ ಹಾಗೂ ಮಾಜಿ ಡಿಸಿಎಂ ಮಧ್ಯೆ ವಾಗ್ವಾದ
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಟಿಕೆಟ್‌ಗಾಗಿ ಬಿಜೆಪಿ ನಾಯಕರಲ್ಲಿ ಅಗ್ಗ ಜಗ್ಗಾಟ ಶುರುವಾಗಿದೆ...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಟಿಕೆಟ್‌ಗಾಗಿ ಬಿಜೆಪಿ ನಾಯಕರಲ್ಲಿ ಅಗ್ಗ ಜಗ್ಗಾಟ ಶುರುವಾಗಿದೆ.
ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಬೆಂ- ಉತ್ತರ ಭಾಗದಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ವಿಚಾರವಾಗಿ ಬಿಜೆಪಿಯಲ್ಲಿ ವಾಗ್ವಾದ ಶುರುವಾಗಿದ್ದು, ಈ ಸಂಬಂಧ ಮಾಜಿ ಸಿಎಂ ಸದಾನಂದಗೌಡ ಅವರು, ಮಾಜಿ ಸಿಎಂಗಿಂತ ಮಾಜಿ ಡಿಸಿಎಂ ದೊಡ್ಡವರಲ್ಲ. ನಾನು ಪಕ್ಷದ ಅಧ್ಯಕ್ಷನಾಗಿಯೂ ದುಡಿದಿರುವೆ ಇದನ್ನು ಡಿಸಿಎಂ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಗುಡುಗಿದ್ದಾರೆ.
ಬೆಂ. ಉತ್ತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಟಿಕೆಟ್ ಹಂಚಿಕೆ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಆರ್. ಅಶೋಕ್ ಅವರು ಸ್ಥಳೀಯ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಬೇಕು, ಅದನ್ನು ಬಿಟ್ಟು ಹೊರ ಜಿಲ್ಲೆಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬಾರದು ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸದಾನಂದಾಗೌಡ ಲೋಕಸಭೆ ವಿಪಕ್ಷ ನಾಯಕಿ ಸುಷ್ಮಾ ಸ್ವರಾಜ್, ಹೇಮಮಾಲಿನಿ, ವೆಂಕಯ್ಯನಾಯ್ಡು ಅವರು ಹೊರಗಿನವರಲ್ಲವೇ? ಅವರಿಗೆ ಕರ್ನಾಕಟದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬಹುದೇ ಎಂದು ಪ್ರಶ್ನಿಸಿದ್ದಾರೆ.
ಲೋಕಸಭೆಯಲ್ಲಿ ಸ್ಪರ್ಧಿಸಲು ಪಕ್ಷ ನನಗೆ ಎಲ್ಲೇ ಟಿಕೆಟ್ ಕೊಟ್ಟರೂ ಸರಿ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಸದಾನಂದಗೌಡ ತಿಳಿಸಿದ್ದಾರೆ.