ನಾಳೆ ಬಿಜೆಪಿಗೆ ಅಧಿಕೃತ ಪ್ರತಿಪಕ್ಷ ಸ್ಥಾನ ಘೋಷಣೆ
ಕರ್ನಾಟಕ ಜನತಾ ಪಕ್ಷ(ಕೆಜೆಪಿ) ಬಿಜೆಪಿಯಲ್ಲಿ ವಿಲೀನಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ಸಂಖ್ಯೆ 44ಕ್ಕೆ ಏರಿಕೆಯಾಗಿದ್ದು...
ಬೆಂಗಳೂರು: ಕರ್ನಾಟಕ ಜನತಾ ಪಕ್ಷ(ಕೆಜೆಪಿ) ಬಿಜೆಪಿಯಲ್ಲಿ ವಿಲೀನಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ಸಂಖ್ಯೆ 44ಕ್ಕೆ ಏರಿಕೆಯಾಗಿದ್ದು, ಬಿಜೆಪಿಗೆ ಅಧಿಕೃತ ಪ್ರತಿಪಕ್ಷ ಸ್ಥಾನ ನೀಡುವ ತೀರ್ಮಾನವನ್ನು ನಾಳೆ ಘೋಷಿಸಲಾಗುವುದು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಬುಧವಾರ ತಿಳಿಸಿದ್ದಾರೆ.
ಕೆಜೆಪಿಯ 4 ಶಾಸಕರನ್ನು ಬಿಜೆಪಿಯ ಶಾಸರಕರಾಗಿ ಮಾನ್ಯತೆ ನೀಡಲಾಗಿದೆ ಎಂದು ಸ್ಪೀಕರ್ ತಿಳಿಸಿದ್ದು, ಶಾಸಕಾಂಗ ನಡವಳಿಯಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಕೆಜೆಪಿಯ ಸಂಸ್ಥಾಪಕ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಸಕರಾದ ಯು.ಬಿ. ಬಣಕಾರ್, ವಿಶ್ವಸಾಥ್ ಪಾಟೀಲ, ಗುರುಮಾದಪ್ಪ ನಾಗಮಾರಪಳ್ಳಿ ಅವರಿಗೆ ಬಿಜೆಪಿ ಶಾಸಕರಾಗಿ ಮಾನ್ಯತೆ ನೀಡಲಾಗಿದೆ.
ಇಂದು ವಿಧಾನಸಭೆ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ವಿಧಾನಸಭೆಯಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದರು.