ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಮತ್ತೆ ಸೋಲು

ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 15 ರನ್‌ಗಳಿಂದ ಸೋಲುಂಡಿದೆ...

Vishwanath S
Updated On : 22 Jan 2014, 7:23 am

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 15 ರನ್‌ಗಳಿಂದ ಸೋಲು ಕಂಡಿದೆ.

ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲೂ ಭಾರತ ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡಿದೆ. ಈ ಮೂಲಕ ಐದು ಏಕದಿನ ಪಂದ್ಯಗಳ ಕ್ರಿಕೆಟ್ ಸರಣಿಯಲ್ಲಿ ಕಿವೀಸ್ 2-0 ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 42 ಓವರ್‌ಗಳಿಗೆ 271 ರನ್ ಗಳಿಸಿತ್ತು. ಮಳೆ ಅಡಿಪಡಿಸಿದರಿಂದ  ಪಂದ್ಯವನ್ನು 42 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಮಳೆಯಿಂದಾಗಿ ಡಕ್‌ವರ್ತ್ ಲೂಯಿಸ್ ನಿಯಮದಂತೆ ಭಾರತಕ್ಕೆ ಗೆಲ್ಲಲು 297 ರನ್‌ಗಳ ಮೊತ್ತ ನೀಡಲಾಯಿತು.

ಈ ಗುರಿಯನ್ನು ಬೆನ್ನಟ್ಟಿದ ಭಾರತ 41.3 ಓವರ್‌ಗಳಲ್ಲಿ 277ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 15 ರನ್‌ಗಳಿಂದ ಸೋಲು ಕಾಣಬೇಕಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement