ಶಿವಗಂಗೆ ರಸ್ತೆಯಲ್ಲಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಆಟೋ ಟ್ಯ್ರಾಕ್ಟರ್ ನಡುವೆ ಡಿಕ್ಕಿ ಸಂಭವಸಿದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ...
ಬೆಂಗಳೂರು: ಆಟೋ ಟ್ಯ್ರಾಕ್ಟರ್ ನಡುವೆ ಡಿಕ್ಕಿ ಸಂಭವಸಿದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಗಂಗೆ ರಸ್ತೆಯಲ್ಲಿ ಬುಧವಾರ ಬೆಳ್ಳಿಗೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4- ನೆಲಮಂಗಲ ತಾಲೂಕಿನ ಹೋನ್ನೇನ ಹಳ್ಳಿ ಬಳಿ ಅಪಘಾತವಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರೀಶಿಲನೆ ಕೈಗೊಂಡಿದ್ದಾರೆ. ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.