ಎಎನ್‌ಆರ್ ಪಂಚಭೂತಗಳಲ್ಲಿ ಲೀನ
ತೆಲುಗು ಚಿತ್ರರಂಗದ ಖ್ಯಾತ ನಟ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕತ ಅಕ್ಕಿನೇನಿ ನಾಗೇಶ್ವರ್ ರಾವ್ ಅವರ...
ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕತ ಅಕ್ಕಿನೇನಿ ನಾಗೇಶ್ವರ್ ರಾವ್ ಅವರ ಅಂತ್ಯಕ್ರಿಯೆ ಗುರುವಾರ ಅನ್ನಪೂರ್ಣ ಸ್ಟೂಡಿಯೋದಲ್ಲಿ ನೇರವೇರಿಸಲಾಯಿತು.
ಸರ್ಕಾರಿ ಸಕಲ ಗೌರವಗಳೊಂದಿಗೆ ಅಕ್ಕಿನೇನಿ ನಾಗೇಶ್ವರ್ ರಾವ್ ಅವರ ಚಿತೆಗೆ ಅವರ ಮಗ ವೆಂಕಟ್ ಅವರು ಅಗ್ನಿ ಸ್ಪರ್ಶ ಮಾಡಿದರು.
ತಮ್ಮ ವೃತ್ತಿ ಜೀವನವನ್ನು ತೆಲುಗು ಚಿತ್ರರಂಗಕ್ಕೆ ಸೀಮಿತವಾಗಿರಿಸಿಕೊಂಡಿದ್ದ ಅಕ್ಕಿನೇನಿ ನಾಗೇಶ್ವರ್ ರಾವ್(91) ಅವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಬುಧವಾರ ಅಸುನೀಗಿದ್ದರು. ಹೀಗಾಗಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಇಂದು ಇಡಲಾಗಿತ್ತು. ಅನಂತರ ಅನ್ನಪೂರ್ಣ ಸ್ಟೂಡಿಯೋದಲ್ಲಿ ಅಕ್ಕಿನೇನಿ ಅವರ ಅಂತ್ಯಕ್ರಿಯೆ ನೇರವೇರಿಸಲಾಯಿತು.
ಅಕ್ಕಿನೇನಿ ಅಂತ್ಯಕ್ರಿಯೆಯಲ್ಲಿ ತೆಲುಗು ಚಿತ್ರರಂಗದ ಗಣ್ಯರು, ಅಕ್ಕಿನೇನಿ ಅಭಿಮಾನಿಗಳು ಪಾಲ್ಗೊಂಡಿದ್ದರು.