ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಸಮಾಧಾನ

ರಾಜ್ಯ ಸಚಿವರ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಗಿದೆ...

Mainashree
Updated On : 23 Jan 2014, 1:25 am

ಬೆಂಗಳೂರು: ರಾಜ್ಯ ಸಚಿವರ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಾಕಾಂಗ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಗುರುವಾರ ನಡೆದ ಶಾಸಾಕಾಂಗ ಸಭೆಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಬಹುತೇಕ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಲಾಖೆ ಸಂಬಂಧ ಪೂರ್ಣ ಅಧ್ಯಯನ ಮಾಡಿ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.

ಜಿಲ್ಲೆ ಪ್ರಗತಿ ಪರಿಶೀಲನಾ ಸಭೆಯು ಸರಿಯಾಗಿ ನಡೆಯುತ್ತಿಲ್ಲ ಎಂದು ಶಾಸಕರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ವಿಪಕ್ಷಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಬೇಕು. ಆದರೆ ನಮ್ಮ ಸಚಿವರು ಇದರಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಶಾಸಕರ ಅಭಿಪ್ರಾಯಗಳಿಗೆ ಸ್ಪಂದಿಸಿದ ಸಿಎಂ, ಈ ಸಂಬಂಧ ಕ್ರಮಕೈಗೊಳ್ಳಲಾಗುವುದು. ಶಾಸಕರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement