ಭೂಮಿ ದುರುಪಯೋಗ ಪ್ರಕರಣ: ಸಚಿವ ಬೇಗ್ಗೆ ಕ್ಲೀನ್ಚಿಟ್
ಭೂಮಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ತಾ ಸಚಿವ ರೋಷನ್ ಬೇಗ್ಗೆ ಲೋಕಾಯುಕ್ತ ಪೊಲೀಸರು ಗುರುವಾರ ಕ್ಲೀನ್ಚಿಟ್ ನೀಡಿದ್ದಾರೆ...
ಬೆಂಗಳೂರು: ಭೂಮಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ತಾ ಸಚಿವ ರೋಷನ್ ಬೇಗ್ಗೆ ಲೋಕಾಯುಕ್ತ ಪೊಲೀಸರು ಗುರುವಾರ ಕ್ಲೀನ್ಚಿಟ್ ನೀಡಿದ್ದಾರೆ.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ರೋಷನ್ ಬೇಗ್ ಅವರು ಅಕ್ರಮ ಎಸಗಿದ್ದಾರೆ ಎಂಬುದು ತನಿಖೆಯಲ್ಲಿ ಸಾಬೀತಾಗಿಲ್ಲ. ಹೀಗಾಗಿ ಲೋಕಾಯುಕ್ತ ಪೊಲೀಸರು ಬೇಗ್ ಅವರಿಗೆ ಪ್ರಕರಣದಿಂದ ಕ್ಲೀನ್ಚಿಟ್ ನೀಡಿದ್ದಾರೆ.
ಸಚಿವ ಬೇಗ್ ಅವರು ಭೂಮಿ ದುರುಪಯೋಗ ಮಾಡಿಕೊಂಡಿದ್ದಾರೆ. ಅಲ್ಲದೆ ನಿವೇಶನ ಹಂಚಿಕೆಯ ನಿಯಮಾವಳಿಗಳನ್ನು ಗಾಳಿ ತೂರಿದ್ದಾರೆ ಎಂಬ ಆರೋಪವಿತ್ತು. ಈ ಸಂಬಂಧ ತನಿಖೆ ಕೈಗೊಂಡಿದ್ದ ಲೋಕಾಯುಕ್ತ ಪೊಲೀಸರು ಕೋರ್ಟ್ಗೆ ಅಂತಿಮ ವರದಿ ಸಲ್ಲಿಸಿದ್ದಾರೆ.
ಸಣ್ಣ ಕೈಗಾರಿಕೆ ಯೋಜನೆಗಾಗಿ ಕಿಯೋನಿಕ್ಸ್ ಸಂಸ್ಥೆ ಭೂಮಿ ಮಂಜೂರು ಮಾಡಿತ್ತು. ಈ ಸಂಬಂಧ ಕಿಯೋನಿಕ್ಸ್ಗೆ ಮಾತ್ರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಲೋಕಾಯುಕ್ತ ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ದೂರುದಾರರಿಗೆ ಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ಪ್ರಕರಣದ ವಿಚಾರಣೆಯನ್ನು ಜನವರಿ. 25ಕ್ಕೆ ಕೋರ್ಟ್ ಮುಂದೂಡಿದೆ.