ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇಜ್ರಿವಾಲ್ ವಿರುದ್ಧ ದೆಹಲಿ ಸಚಿವಾಲಯ ನೌಕರರಿಂದ ಪ್ರತಿಭಟನೆ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು..

Lingaraj Badiger
Updated On : 24 Jan 2014, 4:01 am

ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ದೆಹಲಿ ಸಚಿವಾಲಯ ನೌಕರರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಸಚಿವಾಲಯ ನೌಕರರು ಮೂರು ಬಾರಿ ಸಮಯ ಕೇಳಿದ್ದರು. ಆದರೆ ಇದಕ್ಕೆ ಸ್ಪಂದಿಸದ ಸಿಎಂ ವಿರುದ್ಧ ಈಗ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆರನೇ ವೇತನ ಆಯೋಗ ಜಾರಿಗೊಳಿಸಬೇಕು, ಅರೆಕಾಲಿಕ ಹುದ್ದೆಗಳನ್ನು ಖಾಯಂಗೊಳಿಸಬೇಕು ಮತ್ತು ಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಚಿವಾಲಯದ ನೌಕರರು ಒತ್ತಾಯಿಸಿದ್ದಾರೆ.

ಶೀಘ್ರವೇ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರುವರಿ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement