ಚುನಾವಣೆಗೆ ಸ್ಪರ್ಧಿಸುವುದಾದ್ರೆ ಮಂಡ್ಯದಿಂದ ಮಾತ್ರ: ರಕ್ಷಿತಾ
ಚುನಾವಣೆಗೆ ಸ್ಪರ್ಧಿಸುವುದಾದರೆ ಅದು ಮಂಡ್ಯಾದಿಂದ ಮಾತ್ರ ಎಂದು ನಟಿ ರಕ್ಷಿತಾ ಹೇಳಿದ್ದಾರೆ...
ಬೆಂಗಳೂರು: ಚುನಾವಣೆಗೆ ಸ್ಪರ್ಧಿಸುವುದಾದರೆ ಅದು ಮಂಡ್ಯಾದಿಂದ ಮಾತ್ರ ಎಂದು ನಟಿ ರಕ್ಷಿತಾ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಕ್ಷಿತ, ಒಂದು ವೇಳೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಅದು ಮಂಡ್ಯ ಕ್ಷೇತ್ರದಿಂದ ಮಾತ್ರ ಎಂದು ನಟಿ ರಕ್ಷಿತಾ ತಿಳಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ ಕುರಿತು ಮಾತಾನಾಡಿದ ಅವರು ಜೆಡಿಎಸ್ ವರಿಸ್ಠರು ನನಗೆ ಟಿಕೆಟ್ ನೀಡುವ ಭರವಸೆ ಇದೆ. ನಾನು ಮಂಡ್ಯಾ ಜಿಲ್ಲೆಯ ಸೊಸೆ, ಹಾಗಾಗಿ ನಾನು ಮಂಡ್ಯದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
ಒಂದು ವೇಳೆ ಟಿಕೆಟ್ ನೀಡದಿದ್ದರೆ, ನಾನು ಪಕ್ಷ ಬದಲಿಸುವುದಿಲ್ಲ. ಜೆಡಿಎಸ್ ಪಕ್ಷದಲ್ಲೇ ಇದ್ದು ಪಕ್ಷಕ್ಕಾಗಿ ದುಡಿಯುವೆ ಎಂದು ರಕ್ಷಿತಾ ತಿಳಿಸಿದ್ದಾರೆ.