ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಡಿಎಂಕೆಯಿಂದ ಅಳಗಿರಿ ವಜಾ

ಡಿಎಂಕೆ ದಕ್ಷಿಣ ವಲಯ ಸಂಘಟನಾ ಕಾರ್ಯದರ್ಶಿ ಹಾಗೂ ಪಕ್ಷದ ವರಿಷ್ಠ ಎಂ.ಕರುಣಾನಿಧಿ ಅವರ..

Mainashree
Updated On : 24 Jan 2014, 4:02 am

ಚೆನ್ನೈ: ಡಿಎಂಕೆ ದಕ್ಷಿಣ ವಲಯ ಸಂಘಟನಾ ಕಾರ್ಯದರ್ಶಿ ಹಾಗೂ ಪಕ್ಷದ ವರಿಷ್ಠ ಎಂ.ಕರುಣಾನಿಧಿ ಅವರ ಪುತ್ರ ಎಂ.ಕೆ.ಅಳಗಿರಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಶುಕ್ರವಾರ ವಜಾಗೊಳಿಸಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿರುವ ಕರುಣಾನಿಧಿ, ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಪಕ್ಷದಲ್ಲಿ ಅವರು ಹೊಂದಿದ್ದ ಎಲ್ಲ ಹುದ್ದೆಗಳಿಂದಲೂ ವಜಾಗೊಳಿಸಲಾಗಿದೆ.

ಇಂದು ಬೆಳಗ್ಗೆ ಅಳಗಿರಿ ಅವರು ಕರುಣಾನಿಧಿ ಅವರನ್ನು ಭೇಟಿ ಮಾಡಿದ ನಂತರ ಪಕ್ಷ ಈ ನಿರ್ಧಾರ ತೆಗೆದುಕೊಂಡಿದ್ದು, ವಿಜಯಕಾಂತ್ ಅವರ ಡಿಎಂಡಿಕೆಯೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಮಾಡಿಕೊಳ್ಳುವ ಸಂಬಂಧ ಅಪ್ಪ-ಮಗನ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಹೀಗಾಗಿ ಕರುಣಾನಿಧಿ ತಮ್ಮ ಪುತ್ರನ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement