ದೆಹಲಿ ಪೊಲೀಸರ ದೌರ್ಜನ್ಯದ ವಿಡಿಯೋ ದೃಶ್ಯ ಬಿಡುಗಡೆ
ಎಎಪಿ ಸರ್ಕಾರ ಹಾಗೂ ದೆಹಲಿ ಪೊಲೀಸರ ನಡುವಿನ ಕಿತ್ತಾಟ ತಾರಕಕೇರಿದ್ದು, ದೆಹಲಿ ಪೊಲೀಸರು ಜನರ ಮೇಲೆ ..
ನವದೆಹಲಿ: ಎಎಪಿ ಸರ್ಕಾರ ಹಾಗೂ ದೆಹಲಿ ಪೊಲೀಸರ ನಡುವಿನ ಕಿತ್ತಾಟ ತಾರಕಕೇರಿದ್ದು, ದೆಹಲಿ ಪೊಲೀಸರು ಜನರ ಮೇಲೆ ದೌರ್ಜನ್ಯ ನಡೆಸುತ್ತಿರುವ ವಿಡಿಯೋ ದೃಶ್ಯವನ್ನು ಎಎಪಿ ಶುಕ್ರವಾರ ಬಿಡುಗಡೆ ಮಾಡಿದೆ.
ದೆಹಲಿಯ ಕೆಂಪುಕೋಟೆಯ ಬಳಿ ವ್ಯಕ್ತಿಯೊಬ್ಬನಿಗೆ ಪೊಲೀಸರು ಹಿಗ್ಗಾ-ಮುಗ್ಗಾ ಥಳಿಸುತ್ತಿರುವ ದೃಶ್ಯವನ್ನು ಎಎಪಿ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ.
ಹಣಕ್ಕಾಗಿ ಮೂವರು ಪೊಲೀಸರು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿ ದಾಖಲಾಗಿದೆ. ಈ ವಿಡಿಯೋ ಬಿಡುಗಡೆಯಾಗುತ್ತಿದ್ದಂತೆ ದೆಹಲಿ ಪೊಲೀಸರು ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕಳೆದ ಸೋಮವಾರ ಭ್ರಷ್ಟ ಪೊಲೀಸರನ್ನು ಅಮಾನತು ಅಥವಾ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ಸ್ವತಃ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ಬೀದಿಯಲ್ಲಿ ಪ್ರತಿಭಟನೆಗೆ ಕುಳಿತಿದ್ದರು.