ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಅಗತ್ಯ: ಪ್ರಣಬ್

ಭ್ರಷ್ಟಾಚಾರ ಕ್ಯಾನ್ಸರ್ ಇದ್ದಂತೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು, ಭ್ರಷ್ಟಾಚಾರದ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ಕ್ರಮ..

Lingaraj Badiger
Updated On : 25 Jan 2014, 7:36 am

ನವದೆಹಲಿ: ಭ್ರಷ್ಟಾಚಾರ ಕ್ಯಾನ್ಸರ್ ಇದ್ದಂತೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು, ಭ್ರಷ್ಟಾಚಾರದ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ಹೇಳಿದ್ದಾರೆ.

ನಾಳೆ 65ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂದು ಸಂಜೆ 7 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಣಬ್, ಭಾರತ ಆರ್ಥಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಮುಂದೆಯೂ ಸ್ಥಿರ ಸರ್ಕಾರದ ಅಗತ್ಯ ಇದೆ ಎಂದು ಹೇಳಿದ್ದಾರೆ.

2014 ಭರವಸೆ ಈಡೇರಿಸುವ ಹಾಗೂ ನೋವು ಮರೆಸುವ ವರ್ಷವಾಗಲಿ. ಯುವಕರು ಭವಿಷ್ಯದ ಜವಾಬ್ದಾರಿ ಮರೆಯಬಾರದು ಎಂದರು. ಅಲ್ಲದೆ ಸಮಾಜಘಾತುಕ ಶಕ್ತಿಗಳಿಗೆ ಎಂದೂ ಜಯ ಸಿಗುವುದಿಲ್ಲ ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement