ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿದ್ದ ಭಾರತದ ಮೇಲೆ ಪಾಕ್ ದಾಳಿ
65ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ದೇಶ ಮುಳುಗಿದ್ದರೆ, ಅತ್ತ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ.
ಜಮ್ಮು-ಕಾಶ್ಮೀರ: 65ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ದೇಶ ಮುಳುಗಿದ್ದರೆ, ಅತ್ತ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ.
ಕದನ ವಿರಾಮ ಉಲ್ಲಂಘಿಸಿರುವ ಪಾಕ್ ಸೈನಿಕರು ಗಡಿ ನಿಯಂತ್ರಣ ರೇಖೆಯ ಬಾರಮುಲ್ಲಾ ಜಿಲ್ಲೆಯ ಮೂರು ಠಾಣೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಪಾಕ್ ಸೈನಿಕರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನಾ ಪಡೆ ಗುಂಡಿನ ದಾಳಿ ನಡೆಸುತ್ತಿದೆ. ಹೀಗಾಗಿ ಬಾರಮುಲ್ಲಾ ಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಠಿಯಾಗಿದೆ. ಸದ್ಯ ಪಾಕ್ ಸೈನಿಕರ ಗುಂಡಿನ ದಾಳಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿರುವ ವರದಿಯಾಗಿಲ್ಲ.