ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅನ್ನ ಬಿಟ್ಟ ಬಿನ್ನಿ

ಆಮ್ ಆದ್ಮಿ ಪಕ್ಷದಿಂದ ನಿನ್ನೆ ಉಚ್ಚಾಟನೆಗೊಂಡಿದ್ದ ಶಾಸಕ ವಿನೋದ್ ಕುಮಾರ್ ಬಿನ್ನಿ ಅವರು ಆಪ್‌ನ ಕ್ರಮವನ್ನು ಖಂಡಿಸಿ ಜಂತರ್...

Vishwanath S
Updated On : 27 Jan 2014, 3:05 am

ನವದೆಹಲಿ: ಆಮ್ ಆದ್ಮಿ ಪಕ್ಷದಿಂದ ನಿನ್ನೆ ಉಚ್ಚಾಟನೆಗೊಂಡಿದ್ದ ಶಾಸಕ ವಿನೋದ್ ಕುಮಾರ್ ಬಿನ್ನಿ ಅವರು ಆಪ್‌ನ ಕ್ರಮವನ್ನು ಖಂಡಿಸಿ ಜಂತರ್ ಮಂತರ್‌ನಲ್ಲಿ ಸೋಮವಾರ ಅಮರಣಾಂತ ಉಪವಾಸ ಆರಂಭಿಸಿದ್ದಾರೆ.

ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿದ ಹಿನ್ನೆಲೆಯಲ್ಲಿ ಬಿನ್ನಿಯನ್ನು ಪಕ್ಷದಿಂದ ಉಚ್ಚಾಟಿಸಲು ಪಂಕಜ್ ಕುಮಾರ್ ನೇತೃತ್ವದ ಶಿಸ್ತು ಸಮಿತಿ ನಿರ್ಧಾರ ಕೈಗೊಂಡಿತ್ತು. ಅಲ್ಲದೆ ಬಿನ್ನಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಉಚ್ಚಾಟಿಸಲಾಗಿತ್ತು.

ಪಕ್ಷದ ಈ ಕ್ರಮವನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಕೂತಿರುವ ಬಿನ್ನಿ, ಎಎಪಿ ವಿರುದ್ಧ ಕಿಡಿಕಾರಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಎಎಪಿ ಚುನಾವಣ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಪೂರೈಸುವಲ್ಲಿ ವಿಫಲವಾಗಿರುವ ಎಎಪಿ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದರು.

ಧರಣಿಗೂ ಮುನ್ನ ದೆಹಲಿ ಉಪ ರಾಜ್ಯಪಾಲ ನಜೀಬ್ ಜಂಗ್ ಅವರನ್ನು ಭೇಟಿ ಮಾಡಿ. ಪ್ರಸ್ತುತ ಘಟನಾವಳಿಗ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಕಾನೂನು ಸಚಿವ ಸೋಮನಾಥ್ ಭಾರ್ತಿಯವರು ಮಧ್ಯರಾತ್ರಿ ನಡೆಸಿದ ದಾಳಿಯ ವಿರುದ್ಧ ಬಿನ್ನಿ ದೂರು ನೀಡಿದ್ದಾರೆ.

ಈ ಸಂಬಂಧ ತಮ್ಮ ಸ್ಥಾನವನ್ನು ಲೆಕ್ಕಿಸದೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ಆಶ್ವಾಸನೆ ನೀಡಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement