ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ದಿದ್ದೇ ದೋಣಿ ದುರಂತಕ್ಕೆ ಕಾರಣ: ನಾರಾಯಣಸ್ವಾಮಿ

Lingaraj Badiger
Updated On : 27 Jan 2014, 7:11 am

ನವದೆಹಲಿ: ಅಂಡಮಾನ್ ನಿಕೋಬಾರ್ ದ್ವೀಪದ ಬಳಿ ನೀರುಪಾಲಾದ ಬೋಟ್‌ನಲ್ಲಿ ಜೀವರಕ್ಷಕ ಜಾಕೆಟ್‌ಗಳಾಗಲಿ, ದೋಣಿಗಳಾಗಲಿ ಇರಲಿಲ್ಲ ಎಂದು ಕೇಂದ್ರ ಸಚಿವ ವಿ. ನಾರಾಯಣಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಈ ಖಾಸಗಿ ಬೋಟ್ ಭಾನುವಾರ ಸಂಜೆ ಸಮುದ್ರಪಾಲಾಗಿತ್ತು. ಈ ದುರಂತದಲ್ಲಿ 22 ಮಂದಿ ಸಾವಿಗೀಡಾಗಿದ್ದರು.

ಈ ದುರಂತ ಸಂಭವಿಸಿದಾಗ ಅಕ್ಕಪಕ್ಕದಲ್ಲಿದ್ದ ಮೀನುಗಾರರು ತಕ್ಷಣ ರಕ್ಷಣೆಗೆ ಧಾವಿಸಿದ್ದರಿಂದ ಹೆಚ್ಚಿನ ಪ್ರಾಣ ಹಾನಿ ತಪ್ಪಿತು ಎಂದು ಕೇಂದ್ರ ಸಚಿವ ವಿ. ನಾರಾಯಣಸ್ವಾಮಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement