ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಎಲ್)ವನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ದುಷ್ಕರ್ಮಿಗಳು..
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಎಲ್)ವನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ.
ಈ ಕುರಿತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಕಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಅಪರಿಚಿತ ವ್ಯಕ್ತಿಯೊರ್ವ ನಿನ್ನೆ ಸಂಜೆ ಕೆಐಎಎಲ್‌ನ ಮ್ಯಾನೇಜರ್‌ಗೆ ಇ-ಮೇಲ್‌ವೊಂದನ್ನು ಕಳಿಸಿದ್ದಾನೆ. ಅದರಲ್ಲ್ಲಿ ವಿಮಾನ ನಿಲ್ದಾಣವನ್ನು ಸ್ಪೋಟಿಸುವ ಬೆದರಿಕೆಯೊಡ್ಡಿದ್ದಾನೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬೀಗಿ ಭದ್ರತೆ ಒದಗಿಸಲಾಗಿದ್ದು, ಕೆಐಎಎಲ್‌ನ ರಕ್ಷಣಾ ಸಿಬ್ಬಂದಿ ನಿಲ್ದಾಣಕ್ಕೆ ಬರುವ ವಾಹನಗಳನ್ನು ಮತ್ತು ಪ್ರಯಾಣಿಕರನ್ನು ತೀವ್ರ ತಪಾಸಣೆ ಒಳಪಡಿಸುತ್ತಿದ್ದಾರೆ.
ಇದೊಂದು ಅನಾಮಧೇಯ ಇ-ಮೇಲ್ ಆಗಿದ್ದು, ಇದನ್ನು ಯಾರು ಕಳಿಸಿದ್ದಾರೆ ಎಂಬುದು ಇನ್ನು ಪತ್ತೆಯಾಗಿಲ್ಲ. ಈ ಸಂಬಂಧ ಕೆಐಎಎಲ್‌ನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸ್ಫೋಟ ಬೆದರಿಕೆಯೊಡ್ಡಿರುವ ವ್ಯಕ್ತಿಯ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.