ಕೇಜ್ರಿವಾಲ್, ಸೋಮನಾಥ್ಗೆ 'ಹೈ' ನೋಟಿಸ್
ದೆಹಲಿ ವಿಧಾನಸಭಾ ಚುನಾವಣೆ ವೇಳೆ ಹೆಚ್ಚು ಹಣ ವ್ಯಯಿಸಿರುವ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ವೇಳೆ ಹೆಚ್ಚು ಹಣ ವ್ಯಯಿಸಿರುವ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕಾನೂನು ಸಚಿವ ಸೋಮನಾಥ್ ಭಾರ್ತಿ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಕೇಜ್ರಿವಾಲ್ ಮತ್ತು ಸೋಮನಾಥ್ ಭಾರ್ತಿ ಅವರು ಚುನಾವಣಾ ಆಯೋಗ ನಿಗದಿ ಮಾಡಿರುವುದಕ್ಕಿಂತ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ವಿಜೇಂದ್ರ ಗುಪ್ತಾ ಮತ್ತು ಮೇಹರ್ ಎಂಬುವರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಪ್ಪಿನ್ ಸಂಗೈ ಅವರು ಕೇಜ್ರಿವಾಲ್ಗೆ ನೋಟಿಸ್ ನೀಡಿದ್ದಾರೆ. ಇದೇ ವೇಳೆ ಮೇಹರ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಎಸ್. ಸಿಸ್ತಾನಿ ಅವರು ಸೋಮನಾಥ್ ಭಾರ್ತಿಗೂ ನೋಟಿಸ್ ನೀಡಿದ್ದಾರೆ.