ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಹಿಳೆ ಸಾವಿಗೆ ಕಾರಣವಾದ 'ಫೇಸ್ ಬುಕ್‌'

ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಲೇಖನ ಪ್ರಕಟಿಸಿದ್ದರಿಂದ ಮನನೊಂದ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Srinivasa Murthy VN
Updated On : 28 Jan 2014, 4:44 am

ಕೊಚ್ಚಿ: ಖ್ಯಾತ ಸಾಮಾಜಿಕ ತಾಣ ಫೇಸ್ ಬುಕ್ ನಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಲೇಖನ ಪ್ರಕಟಿಸಿದ್ದರಿಂದ ತೀವ್ರವಾಗಿ ಮನನೊಂದ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ವಿದ್ರಾವಕ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಕೇರಳದ ಕೊಚ್ಚಿಯ ನಿವಾಸಿಯಾಗಿದ್ದ 27 ವರ್ಷದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಹಿಳೆಯ ಸಾವಿಗೆ ಎದುರು ಮನೆಯ ಯುವಕನೇ ಕಾರಣ ಎಂದು ಆರೋಪಿಸಿರುವ ಸಂಬಂಧಿಕರು, ಆತ ಫೇಸ್ ಬುಕ್ ನಲ್ಲಿ ಆಕೆಯ ವಿರುದ್ಧ ಅವಹೇಳನಕಾರಿಯಾಗಿ ಬರೆದಿದ್ದನು ಎಂದು ಆರೋಪಿಸಿದ್ದಾರೆ.

ಅಲ್ಲದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೀಡಾದ ಮಹಿಳೆ ಈ ಹಿಂದೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಳು. ಆದರೆ ಕೊಚ್ಚಿ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದರು. ನಂತರ ಮಹಿಳೆ ಹೈಕೋರ್ಟ್‌ನಲ್ಲಿ ಈ ಕುರಿತಂತೆ ದೂರು ದಾಖಲಿಸಿದಳು. ಮಹಿಳೆಯ ದೂರು ದಾಖಸಿಕೊಂಡ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಕೊಚ್ಚಿ ಪೊಲೀಸರಿಗೆ ಸೂಚಿಸಿತ್ತು.

ಆದರೆ ಮತ್ತೆ ಅಂತಹುದೇ ಲೇಖನಗಳು ಮತ್ತೆ ಫೇಸ್ ಬುಕ್ ನಲ್ಲಿ ಪ್ರಕಟವಾದ ಹಿನ್ನಲೆಯಲ್ಲಿ ಮಹಿಳೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement