ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೃಷ್ಣಮೃಗ ಭೇಟೆ: ಮಾರ್ಚ್10ಕ್ಕೆ ವಿಚಾರಣೆ ಮುಂದೂಡಿಕೆ

ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಬೇಟೆ ಪ್ರಕರಣದ ವಿಚಾರಣೆಯನ್ನು ಜೋಧ್‌ಪುರ ನ್ಯಾಯಾಲಯ ಮಾರ್ಚ್ 10ಕ್ಕೆ ಮುಂದೂಡಿದೆ.

Srinivasa Murthy VN
Updated On : 29 Jan 2014, 5:17 am

ಜೋಧ್‌ಪುರ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ವಿರುದ್ಧದ ಕೃಷ್ಣಮೃಗ ಬೇಟೆ ಪ್ರಕರಣದ ವಿಚಾರಣೆಯನ್ನು ಜೋಧ್‌ಪುರ ನ್ಯಾಯಾಲಯ ಮಾರ್ಚ್ 10ಕ್ಕೆ ಮುಂದೂಡಿದೆ.

ಪ್ರಕರಣ ಸಂಬಂಧ ಜೋಧ್‌ಪುರದಲ್ಲಿ ಇಂದು ಬೆಳಗ್ಗೆ ಆರಂಭಗೊಂಡಿದ್ದ ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿತ್ತು. ಮತ್ತೆ 2.30ಕ್ಕೆ ವಿಚಾರಣೆ ಆರಂಭಿಸಿದ ನ್ಯಾಯಾಲಯ, ಉಭಯ ವಕೀಲರ ವಿಚಾರಣೆಯನ್ನು ಆಲಿಸಿ ವಿಚಾರಣೆಯನ್ನು ಮಾರ್ಚ್ 10ಕ್ಕೆ ಮುಂದೂಡಿದೆ. ಈ ಹಿಂದೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ನಟ ಸಲ್ಮಾನ್ ಖಾನ್ ಗೆ ಸಮನ್ಸ್ ಜಾರಿ ಮಾಡಿತ್ತು.

ಹೀಗಾಗಿ ಪ್ರಕರಣದ ಇಂದಿನ ವಿಚಾರಣೆಗಾಗಿ ನಟ ಸಲ್ಮಾನ್ ಖಾನ್ ಅವರು ಖುದ್ದುಹಾಜರಾಗಿದ್ದರು. 1998ರಲ್ಲಿ 'ಹಮ್ ಸಾಥ್ ಸಾಥ್ ಹೇ' ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ನಟ ಸಲ್ಮಾನ್ ಖಾನ್ ಅವರು ಚಿತ್ರತಂಡದೊಂದಿಗೆ ಸೇರಿ ಜೋಧ್‌ಪುರದ ರಕ್ಷಿತಾರಣ್ಯದಲ್ಲಿ 2 ಕೃಷ್ಣ ಮೃಗಗಳನ್ನು ಭೇಟೆಯಾಡಿದ ಆರೋಪ ಎದುರಿಸುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟರಾದ ಸೈಫ್ ಅಲಿ ಖಾನ್, ಸೊನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್ 51, 52 ಮತ್ತು ಐಪಿಸಿ ಸೆಕ್ಷನ್ 149ರ ಅಡಿಯಲ್ಲಿ ದೂರು ದಾಖಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement