ಫೆ.14ರಂದು ರಾಜ್ಯ ಬಜೆಟ್ ಮಂಡನೆ
ಫೆಬ್ರುವರಿ 14ರಂದು ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ಬೆಂಗಳೂರು: ಫೆಬ್ರುವರಿ 14ರಂದು 2014-15ನೇ ಸಾಲಿನ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಬಜೆಟ್ ನಲ್ಲಿ ಎಲ್ಲಾ ವರ್ಗಗಳಿಗೂ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ.
ಎಲ್ಲ ಶಾಸಕರ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಮತ್ತು ತಿಂಗಳಿಗೊಮ್ಮೆ ಶಾಸಕರ ಸಭೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು.
ಗ್ರಾಮೀಣ ಪ್ರದೇಶದ ವಿದ್ಯುತ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಸಿದ್ದು ತಿಳಿಸಿದರು.