ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

2ನೇ ಹಂತದ ಮೆಟ್ರೋಗೆ 'ಕೇಂದ್ರ'ದ ಗ್ರೀನ್ ಸಿಗ್ನಲ್

ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಮೆಟ್ರೋ ರೈಲು ನಿಲ್ದಾಣದ 2ನೇ ಹಂತದ ಕಾಮಗಾರಿಗೆ ಕೇಂದ್ರ ಸರ್ಕಾರ ಗುರುವಾರ ಒಪ್ಪಿಗೆ ಸೂಚಿಸಿದೆ.

Srinivasa Murthy VN
Updated On : 30 Jan 2014, 5:04 am

ನವದೆಹಲಿ: ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಮೆಟ್ರೋ ರೈಲು ನಿಲ್ದಾಣದ 2ನೇ ಹಂತದ ಕಾಮಗಾರಿಗೆ ಕೇಂದ್ರ ಸರ್ಕಾರ ಗುರುವಾರ ಒಪ್ಪಿಗೆ ಸೂಚಿಸಿದೆ.

ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದರು.

ಒಟ್ಟು 6 ಮಾರ್ಗಗಳಲ್ಲಿ ಮೆಟ್ರೋ ರೈಲು ಕಾಮಗಾರಿ ನಡೆಯಲಿದ್ದು, ಒಟ್ಟು 61 ನಿಲ್ದಾಣಗಳನ್ನು ನಿರ್ಮಿಸಲಾಗುತ್ತದೆ. ಬೈಯ್ಯಪ್ಪನಹಳ್ಳಿ ನಿಲ್ದಾಣದಿಂದ ವೈಟ್ ಫೀಲ್ಡ್ (14 ನಿಲ್ದಾಣಗಳು), ಗೊಟ್ಟಿಗೆರೆಯಿಂದ ನಾಗವಾರ (18 ನಿಲ್ದಾಣಗಳು), ಪುಟ್ಟೇನಹಳ್ಳಿಯಿಂದ ಅಂಜನಾಪುರ (5 ನಿಲ್ದಾಣಗಳು), ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ (16 ನಿಲ್ದಾಣಗಳು), ಹೆಸರಘಟ್ಟ ಕ್ರಾಸ್ ನಿಂದ ಬಿಐಇಸಿ (3 ನಿಲ್ದಾಣಗಳು) ಮತ್ತು ಮೈಸೂರು ರಸ್ತೆಯಿಂದ ಕೆಂಗೇರಿ(5 ನಿಲ್ದಾಣಗಳು) ವರೆಗೆ 2ನೇ ಹಂತದ ಮೆಟ್ರೋ ರೈಲು ಮಾರ್ಗದ ಕಾಮಗಾರಿ ಆರಂಭಗೊಳ್ಳಲಿದೆ.

ನಿಗದಿಯಂತೆ ಕಾಮಗಾರಿ ನಡೆದರೆ 2018ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಕಾಮಗಾರಿಯ ಒಟ್ಟು ಅಂತರ 72.1 ಕಿ.ಮೀ ಗಳಾಗಿದ್ದು, ಕಾಮಗಾರಿಯ ಒಟ್ಟು ವೆಚ್ಚ ಸುಮಾರು 27 ಸಾವಿರ ಕೋಟಿ ರುಪಾಯಿ ಎಂದು ಅಂದಾಜಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement