ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಹುಲ್ ವಿರುದ್ಧ ಸಿಡಿದೆದ್ದ ಸಿಖ್ಖರು

1984ರ ಸಿಖ್ ವಿರೋಧಿ ದಂಗೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಸಿಖ್ ಸಂಘಟನೆಗಳು ಸಿಡಿದೆದಿದ್ದು...

Srinivasa Murthy VN
Updated On : 30 Jan 2014, 2:25 am

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಸಿಖ್ ಸಂಘಟನೆಗಳು ಸಿಡಿದೆದಿದ್ದು, ಗುರುವಾರ ನವದೆಹಲಿಯ ಎಐಸಿಸಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

1984ರ ಸಿಖ್ ವಿರೋಧಿ ದಂಗೆ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಅವರ ಹೇಳಿಕೆ ಇದೀಗ ಸಿಖ್ ಧರ್ಮೀಯರ ಪ್ರತಿಭಟನೆಗೆ ನಾಂದಿಯಾಗಿದೆ. ನವ ದೆಹಲಿಯಲ್ಲಿರುವ ಎಐಸಿಸಿ ಕೇಂದ್ರ ಕಚೇರಿ ಎದುರು ಜಮಾಯಿಸಿರುವ ಸಿಖ್ ಧರ್ಮೀಯರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದು, ರಾಹುಲ್ ಗಾಂಧಿ ಅವರು ತಪ್ಪಿತಸ್ಥ ನಾಯಕರ ಹೆಸರುಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಸಿಖ್ಖರ ಈ ಪ್ರತಿಭಟನೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಕ್ರೋಶಿತ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಎಐಸಿಸಿ ಕಚೇರಿ ಪ್ರವೇಶಕ್ಕೆ ಯತ್ನಿಸಿದ್ದಾರೆ.

ಅಲ್ಲದೆ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿರುವ ಪ್ರತಿಭಟನಾಕಾರರು, ಕಪ್ಪು ಬಾವುಟ ಪ್ರದರ್ಶಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಎಐಸಿಸಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ನೂರಾರು ಪೊಲೀಸರು ಕಚೇರಿಯನ್ನು ಸುತ್ತುವರೆದಿದ್ದಾರೆ.

ಇತ್ತೀಚೆಗೆ ಖಾಸಗಿ ಸುದ್ದಿವಾಹಿನಿ ನಡೆಸಿದ್ದ ಸಂದರ್ಶನದ ವೇಳೆ ಮಾತನಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಸಿಖ್ ವಿರೋಧಿ ದಂಗೆಗೆ ಕೆಲ ಕಾಂಗ್ರೆಸ್ ನಾಯಕರು ಕಾರಣ ಎಂಬುದನ್ನು ಒಪ್ಪಿಕೊಂಡಿದ್ದರು. ರಾಹುಲ್ ಗಾಂಧಿ ಅವರ ಈ ವಿವಾದಾತ್ಮಕ ಹೇಳಿಕೆ ಇದೀಗ ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ರಾಹುಲ್ ಹೇಳಿಕೆಯಿಂದಾಗಿ ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತದ ಹೊಗೆಯಾಡುತ್ತಿದ್ದು, ಉತ್ತರ ಪ್ರದೇಶ, ಛತ್ತೀಸ್ ಘಡ ಮತ್ತು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರು ರಾಹುಲ್ ಹೇಳಿಕೆಯನ್ನು ವಿರೋಧಿಸಿದ್ದಾರೆ.

ರಾಹುಲ್ ಸಂದರ್ಶನದಿಂದಾಗಿ ಪಕ್ಷ ಬಿಟ್ಟ ಪಂಜಾಬ್ 'ಕೈ'ಶಾಸಕ
ಇದೇ
ವೇಳೆ ರಾಹುಲ್ಗಾಂಧಿ ಅವರುವಿವಾದಾತ್ಮಕ ಸಂದರ್ಶನದಿಂದಾಗಿ ಕಾಂಗ್ರೆಸ್ಪಕ್ಷದ ಮೇಲೆವ್ಯತಿರಿಕ್ತ ಪರಿಣಾಮ ಬೀರಲು ಆರಂಭಿಸಿದ್ದು, ಪಂಜಾಬ್ಕಾಂಗ್ರೆಸ್ ಶಾಸಕ ಪಕ್ಷವನ್ನು ತೊರೆದಿದ್ದಾರೆ. ಛತ್ತೀಸ್ ಘಡ ಮತ್ತು ಮಧ್ಯಪ್ರದೇಶ ರಾಜ್ಯಗಳಕಾಂಗ್ರೆಸ್ ನಾಯಕರು ರಾಹುಲ್ ಹೇಳಿಕೆಯನ್ನು ವಿರೋಧಿಸಿದ್ದಾರೆ.

ಈ ನಡುವೆ ಪಂಜಾಬ್ಉಪ ಮುಖ್ಯಮಂತ್ರಿಸುಖಬೀರ್ ಸಿಂಗ್ ಬಾದಲ್ ಅವರು ಮಾತನಾಡಿ,ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಸಂದರ್ಶನವನ್ನು ಸಾಕ್ಷಿಯಾಗಿ ಪರಿಗಣಿಸಿ ನ್ಯಾಯಾಲಯ ಸ್ವಯಂಪ್ರೇರಿತದೂರು ದಾಖಸಿಕೊಳ್ಳಬೇಕುಎಂದು ರಾಹುಲ್ಗಾಂಧಿ ಅವರಿಗೆನೋಟಿಸ್ ನೀಡಬೇಕುಎಂದು ಆಗ್ರಹಿಸಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement