ಸಬ್ಸಿಡಿ ಸಿಲಿಂಡರ್ ಏರಿಕೆಗೆ ಕೇಂದ್ರ ಅಸ್ತು
ಸಬ್ಸಿಡಿಯಲ್ಲಿ ನೀಡಲಾಗುತ್ತಿರುವ ಸಿಲಿಂಡರ್‌ಗಳ ಸಂಖ್ಯೆಯನ್ನು ಏರಿಸುವ ನಿರ್ಧಾರಕ್ಕೆ ಗುರುವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ನವದೆಹಲಿ: ಸಬ್ಸಿಡಿಯಲ್ಲಿ ನೀಡಲಾಗುತ್ತಿರುವ ಸಿಲಿಂಡರ್‌ಗಳ ಸಂಖ್ಯೆಯನ್ನು ಏರಿಸುವ ನಿರ್ಧಾರಕ್ಕೆ ಗುರುವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಗ್ಯಾಸ್ ಬಳಕೆದಾರರಿಗೆ ನೀಡಲಾಗುತ್ತಿರುವ ಸಬ್ಸಿಡಿ ಸಹಿತ ಸಿಲಿಂಡರ್ ಗಳ ಸಂಖ್ಯೆಯನ್ನು ಏರಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ನವ ದೆಹಲಿಯಲ್ಲಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ನೂತನ ನಿರ್ಧಾರದಿಂದ ಕೇಂದ್ರಸರ್ಕಾರ ಮೇಲೆ 5 ಸಾವಿರ ಕೋಟಿ ರು.ಗಳ ಹೆಚ್ಚುವರಿ ಹೊರೆ ಬೀಳಲಿದೆ.
ಸಚಿವ ಸಂಪುಟ ಸಭೆ ಬಳಿಕ ಪೆಟ್ರೋಲಿಯಂ ಸಚಿವ ವೀರಪ್ಪ ಮೊಯ್ಲಿ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 'ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 12ಕ್ಕೆ ಏರಿಸಲಾಗಿದೆ' ಎಂದು ತಿಳಿಸಿದರು. ಅಲ್ಲದೆ 'ಗ್ಯಾಸ್ ಸಿಲಿಂಡರ್ ಪಡೆಯಲು ಆಧಾರ್ ಗುರುತಿನ ಚೀಟಿ ಕಡ್ಡಾಯವಲ್ಲ' ಎಂಬುದನ್ನು ಕೂಡ ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದರು.
ಕೇಂದ್ರದ ಈ ನಿರ್ಧಾರದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 5 ಸಾವಿರ ಕೋಟಿ ರುಪಾಯಿಗಳ ಹೆಚ್ಚುವರಿ ಹೊರೆ ಬೀಳಲ್ಲಿದ್ದು, ದೇಶಾದ್ಯಂತ ಗ್ಯಾಸ್ ಬಳುಸುತ್ತಿರುವ ಸುಮಾರು 1.3 ಕೋಟಿ ಬಳಕೆದಾರರಿಗೆ ಅನುಕೂಲವಾಗಲಿದೆ. ಮುಂದಿನ ಫೆಬ್ರವರಿ ಅಥವಾ ಮಾರ್ಚ್ ತಿಂಗಳಿನಿಂದ ನೂತನ ಆದೇಶ ಜಾರಿಗೆ ಬರಲಿದೆ.