ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇಜ್ರಿವಾಲ್ ಭ್ರಷ್ಟರ ಪಟ್ಟಿಯಲ್ಲಿ, ಬಿಎಸ್‌ವೈ, ಮೊಯ್ಲಿ, ಅನಂತ್, ಎಚ್‌ಡಿಕೆ

ಭ್ರಷ್ಟ ರಾಜಕಾರಣಿಗಳ ವಿರುದ್ಧ ಗುಡುಗಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಅವರು,..

Lingaraj Badiger
Updated On : 31 Jan 2014, 1:54 am

ನವದೆಹಲಿ: ಭ್ರಷ್ಟ ರಾಜಕಾರಣಿಗಳ ವಿರುದ್ಧ ಗುಡುಗಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭ್ರಷ್ಟ ರಾಜಕಾರಣಿಗಳನ್ನು ಮಣಿಸುವುದೇ ನಮ್ಮ ಗುರಿ ಎಂದಿದ್ದಾರೆ.

ಇಂದು ಎಎಪಿಯ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ರಾಜ್ಯದ ನಾಲ್ವರು ನಾಯಕರು ಸೇರಿದಂತೆ ಹಲವು ಭ್ರಷ್ಟ ನಾಯಕರ ಹೆಸರನ್ನು ಪ್ರಕಟಿಸಿದ್ದಾರೆ. ಕೇಂದ್ರ ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯ್ಲಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್‌ಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮನೆಗೆ ಕಳುಹಿಸುವಂತೆ ಕರೆ ನೀಡಿದ್ದಾರೆ.

ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ, ಹಣಕಾಸು ಸಚಿವ ಪಿ.ಚಿದಂಬರಂ, ಮಾಜಿ ಕೇಂದ್ರ ಸಚಿವ ಎ.ರಾಜಾ, ಬಿಎಸ್ಪಿ ನಾಯಕಿ ಮಾಯಾವತಿ, ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್, ಜಿಂದಾಲ್, ನಿತಿನ್ ಗಡ್ಕರಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ವಿರುದ್ಧ ಕೇಜ್ರಿವಾಲ್ ಗುಡುಗಿದ್ದಾರೆ.

ಆಪ್ ಅಧಿಕಾರಕ್ಕೆ ಬಂದು ಒಂದು ತಿಂಗಳಲ್ಲೇ ದೆಹಲಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಿದೆ. ಕಳೆದ 65 ವರ್ಷದಲ್ಲಿ ಆಗದನ್ನು ನಾವು 1 ತಿಂಗಳಲ್ಲಿ ಸಾಧಿಸಿದ್ದೇವೆ ಎಂದು ಕೇಜ್ರಿವಾಲ್ ಹೇಳಿದರು.

ಇದೇ ವೇಳೆ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಲೋಕಪಾಲ್ ಮಸೂದೆ ಪ್ರಬಲವಾಗಿಲ್ಲ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement