ಉ.ಖಂಡದ ನೂತನ ಸಿಎಂ ಆಗಿ ಹರೀಶ್ ರಾವತ್ ಆಯ್ಕೆ
ಉತ್ತರಖಂಡದ ನೂತನ ಮುಖ್ಯಮಂತ್ರಿಯಾಗಿ ಕೇಂದ್ರ ಸಚಿವ ಹರೀಶ್ ರಾವತ್ ಅವರು ಆಯ್ಕೆಯಾಗಿದ್ದಾರೆ.
ಡೆಹ್ರಾಡೂನ್: ಉತ್ತರಖಂಡದ ನೂತನ ಮುಖ್ಯಮಂತ್ರಿಯಾಗಿ ಕೇಂದ್ರ ಸಚಿವ ಹರೀಶ್ ರಾವತ್ ಅವರು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ತೆರವಾಗಿದ್ದ ಉತ್ತರಖಂಡ ಮುಖ್ಯಮಂತ್ರಿ ಸ್ಥಾನಕ್ಕೆ ಕೇಂದ್ರ ಸಚಿವ ಹರೀಶ್ ರಾವತ್ ಅವರನ್ನು ಆಯ್ಕೆ ಮಾಡಲಾಗಿದ್ದು, ಡೆಹ್ರಾಡೂನ್ನಲ್ಲಿರುವ ಬಿಜಾಪುರ ಅತಿಥಿ ಗೃಹದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಅಂಬಿಕಾ ಸೋನಿ, ಜನಾರ್ಧನ ದ್ವಿವೇದಿ ಮತ್ತು ಗುಲಾಂನಬಿ ಆಜಾದ್ ಆವರು ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿಯಾಗಿದ್ದ ವಿಜಯ್ ಬಹುಗುಣ ಅವರು ನಿನ್ನೆಯಷ್ಟೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದೀಗ ನೂತನ ಮುಖ್ಯಮಂತ್ರಿಯಾಗಿ ಹರೀಶ್ ರಾವತ್ ಅವರು ಆಯ್ಕೆಯಾಗಿದ್ದಾರೆ.