ಕೆಪಿಎಸ್ಸಿ ಆಯ್ಕೆ ಪಟ್ಟಿಗೆ ನೀಡಿದ್ದ ತಡೆಯಾಜ್ಞೆ ತೆರವು
ಕರ್ನಾಟಕ ಲೋಕಸಭಾ ಆಯೋಗ(ಕೆಪಿಎಸ್ಸಿ)ದ 2011ನೇ ಸಾಲಿನ...
ಬೆಂಗಳೂರು: ಕರ್ನಾಟಕ ಲೋಕಸಭಾ ಆಯೋಗ(ಕೆಪಿಎಸ್ಸಿ)ದ 2011ನೇ ಸಾಲಿನ ಗೆಜೆಟಡ್ ಪ್ರೊಬೆಷರಿ ಅಧಿಕಾರಿಗಳ ಆಯ್ಕೆ ಪಟ್ಟಿಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ಬುಧವಾರ ತೆರವುಗೊಳಿಸಿದೆ.
ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಆಯ್ಕೆ ಪಟ್ಟಿಗೆ ತಡೆ ನೀಡಬೇಕು ಎಂದು ಕೋರಿ ಡಾ. ಮೈತ್ರಿ ಎಂಬುವವರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೆಎಟಿ ಏಪ್ರಿಲ್ 16 ರಂದು ಆಯ್ಕೆ ಪಟ್ಟಿಗೆ ತಡೆಯಾಜ್ಞೆ ವಿಧಿಸಿತ್ತು.
ಪ್ರಕರಣದ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ತಡೆಯಾಜ್ಞೆಯನ್ನು ತೆರವುಗೊಳಿಸಿ ಆದೇಶಿಸಿದೆ.
ರಾಜ್ಯ ಸರ್ಕಾರದ ವಿರೋಧದ ನಡುವೆಯೂ ಕೆಪಿಎಸ್ಸಿ 2011ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ಪಟ್ಟಿ ಪ್ರಕಟಿಸಿತ್ತು.