ಬಜೆಟ್: ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ
ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಹೇಳಿಕೆಯ ಬೆನ್ನಲ್ಲೇ ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ..
ಮುಂಬೈ: ಬಜೆಟ್ ನಿಮಿತ್ತ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಹೇಳಿಕೆಯ ಬೆನ್ನಲ್ಲೇ ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ ಏರಿಕೆ ಕಂಡಿದ್ದು, 25, 732, 87 ಅಂಕಗಳಿಗೇರಿದೆ.
ಮುಂದಿನ ವಾರ ಮಂಡನೆಯಾಗಲಿರುವ ಬಜೆಟ್ ಕುರಿತು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಹೇಳಿಕೆ ನೀಡದ್ದ ಬೆನ್ನಲ್ಲೇ, ಸ್ಥಿರ ಬಜೆಟ್ ನಿರೀಕ್ಷಿಸಿರುವ ಷೇರುದಾರರು ಮಾರುಕಟ್ಟೆಯಲ್ಲಿ ಷೇರು ಖರೀದಿಯಲ್ಲಿ ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಹೀಗಾಗಿ ಸೆನ್ಸೆಕ್ಸ್ ತನ್ನ ಸಾರ್ವಕಾಲಿಕ ದಾಖಲೆ 25, 735, 87 ಅಂಕಗಳಿಗೇರಿದೆ. ನಿಷ್ಟಿ ಕೂಡ 59.55 ಅಂಕಗಳ ದಾಖಲೆ ಮಟ್ಟದ ಏರಿಕೆಯೊಂದಿಗೆ 7, 694.25 ಅಂಕಗಳಿಗೇರಿದೆ.
ಬಜೆಟ್ ಕುರಿತಂತೆ ಈ ಹಿಂದೆ ಹೇಳಿಕೆ ನೀಡಿದ್ದ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ದೇಶದ ಆರ್ಥಿಕತೆಯನ್ನು ಮೇಲೆತ್ತಲು ಈ ಬಾರಿ ಕೆಲವು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲೇಬೇಕಾಗಿದೆ ಎಂದು ಹೇಳಿದ್ದರು. ಅರುಣ್ ಜೇಟ್ಲಿ ಅವರ ಹೇಳಿಕೆ ಕುರಿತಂತೆ ಈಗಾಗಲೇ ದೇಶೀ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ವಿದೇಶಿ ಬಂಡವಾಳ ಹರಿದುಬರುತ್ತಿದ್ದು, ದೇಶೀಯ ಚಿಲ್ಲರೆ ಹೂಡಿಕೆದಾರರು ಕೂಡ ದೊಡ್ಡ ಪ್ರಮಾಣದಲ್ಲಿ ಷೇರು ಖರೀದಿಗೆ ಮುಂದಾಗಿದ್ದಾರೆ.
ಈ ಬೆಳವಣಿಗೆ ಷೇರುಮಾರುಕಟ್ಟೆಗೆ ಹೊಸ ಉತ್ತೇಜನ ನೀಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.