ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಚೆನ್ನೈ ಕಟ್ಟಡ ಕುಸಿತ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

ಚೆನ್ನೈ ಹೊರವಲಯದ ಮೌಲಿವಾಕ್ಕಂನಲ್ಲಿ ಕಳೆದ ಶನಿವಾರ ಸಂಭವಸಿದ್ದ...

Mainashree
Updated On : 3 Jul 2014, 7:03 am

ಚೈನ್ನೈ: ಚೆನ್ನೈ ಹೊರವಲಯದ ಮೌಲಿವಾಕ್ಕಂನಲ್ಲಿ ಕಳೆದ ಶನಿವಾರ ಸಂಭವಸಿದ್ದ 12 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.

ಕಳೆದ ಆರು ದಿನಗಳಿಂದ ಕಾರ್ಯಚರಣೆ ನಡೆಸುತ್ತಿರುವ ಎನ್‌ಡಿಆರ್‌ಎಫ್‌ನ ಸಿಬ್ಬಂದಿ ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಇನ್ನೂ 11 ಜನ ಕಟ್ಟಡದ ಕೆಳ ಅಂತಸ್ತಿನಲ್ಲಿ ಸಿಲುಕಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ಎನ್‌ಡಿಆರ್‌ಎಫ್‌ನ 400 ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಕಟ್ಟಡ ಕುಸಿತ ಪ್ರಕರಣದ ತನಿಖೆಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆದೇಶಿಸಿದ್ದು, ಇದಕ್ಕಾಗಿ ಏಕ ವ್ಯಕ್ತಿ ತನಿಖಾ ತಂಡವನ್ನು ರಚಿಸಿದ್ದಾರೆ. ಮಾಜಿ ನ್ಯಾಯಾಧೀಶರಾದ ಆರ್. ರಘುಪತಿ ಅವರು ತನಿಖೆ ನಡೆಸಲಿದ್ದಾರೆ.

ಕಳಪೆ ಕಾಮಗಾರಿಯಿಂದಲೆ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖಾ ವರದಿ ತಿಳಿಸಿದೆ.





Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement