ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಟಿ ಜಿಯಾ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಕೋರ್ಟ್ ಆದೇಶ

Vishwanath S
Updated On : 3 Jul 2014, 6:45 am

ಮುಂಬೈ: ಬಾಲಿವುಡ್ ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುವಂತೆ ಮುಂಬೈ ಹೈ ಕೋರ್ಟ್ ಗುರುವಾರ ಸಿಬಿಐಗೆ ಆದೇಶಿಸಿದೆ.

ಬಾರಿ ಕುತೂಹಲ ಮೂಡಿಸಿದ್ದ ಹೈ ಫ್ರೋಪೈಲ್ ಪ್ರಕರಣಕ್ಕೆ ಇದೀಗ ಮರು ಜೀವ ಬಂದಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ಹೈ ಕೋರ್ಟ್ ವಹಿಸಿದೆ.

ಜಿಯಾ ಖಾನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಆದಿತ್ಯ ಪಂಚೋಲಿ ಅವರ ಮಗ ಸೂರಜ್ ಪಂಚೋಲಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆತ್ಮಹತ್ಯೆಗೂ ಮುನ್ನ ನಟಿ ಜಿಯಾಖಾನ್ ಅವರು ಬರೆದಿದ್ದ 6 ಪುಟಗಳ ಡೆಟ್ ನೋಟ್‌ನಲ್ಲಿ ಸೂರಜ್ ಹಾಗೂ ತನ್ನ ನಡುವಿನ ಸಂಬಂಧವನ್ನು ತಿಳಿಸಿದ್ದರು. ಡೆಟ್ ನೋಟ್ ಆಧಾರದ ಮೇಲೆ ಕಳೆದ ವರ್ಷ ಜೂನ್ 10 ರಂದು ಸೂರಜ್‌ನನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಇದಾದ ನಂತರ ಜೂಲೈ 1 ರಂದು ಮುಂಬೈ ಹೈಕೋರ್ಟ್ ಸೂರಜ್‌ಗೆ ಜಾಮೀನು ನೀಡಿತ್ತು.

ಜಿಯಾ ಖಾನ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಅವಳನ್ನು ಕೊಲೆ ಮಾಡಲಾಗಿದೆ ಎಂದು ಜಿಯಾ ಖಾನ್ ತಾಯಿ ರಾಬಿಯಾ ಖಾನ್ ಆರೋಪಿಸುತ್ತಾ ಬಂದಿದ್ದರು. ಅಲ್ಲದೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದರು.

2013 ಜೂನ್ 3 ರಂದು ಜಿಯಾ ಖಾನ್ ತಮ್ಮ ಮುಂಬೈನ ಜುಹು ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement