ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೆಂಗಳೂರಿನ ನವರತ್ನ ಜ್ಯುವೆಲರ್ಸ್‌ನಲ್ಲಿ ಅಗ್ನಿ ಆಕಸ್ಮಿಕ

ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ನವರತ್ನ ಜ್ಯುವೆಲರ್ಸ್‌ನಲ್ಲಿ ಗುರುವಾರ ...

Lingaraj Badiger
Updated On : 3 Jul 2014, 11:58 am

ಬೆಂಗಳೂರು: ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ನವರತ್ನ ಜ್ಯುವೆಲರ್ಸ್‌ನಲ್ಲಿ ಗುರುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣಗಳು ಬೆಂಕಿಗಾಹುತಿಯಾಗಿವೆ.

ಇಂದು ಬೆಳಗ್ಗೆ 9.20ರ ಸುಮಾರಿಗೆ ಎಂ.ಜಿ.ರಸ್ತೆಯ ನವರತ್ನ ಜ್ಯುವೆಲರ್ಸ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಚಿನ್ನಾಭರಣ ಮಳಿಗೆಗೆ ಸಂಪೂರ್ಣವಾಗಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮಳಿಗೆಯ ಕಿಟಕಿ ಗಾಜುಗಳನ್ನು ಹೊಡೆದು ಚಿನ್ನಾಭರಣವನ್ನು ಕೆಳಗೆ ಎಸೆಯುತ್ತಿದ್ದಾರೆ.

ಬೆಂಕಿ ಆಕಸ್ಮಿಕದ ಬಗ್ಗೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಎಂಟು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಕಟ್ಟಡದ ಸುತ್ತಲೂ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಇನ್ನೂ ಮೂರರಿಂದ ನಾಲ್ಕು ಗಂಟೆಗಳ ಕಾಲ ಕಾರ್ಯಚರಣೆ ಮುಂದುವರೆಯುವ ಸಾಧ್ಯತೆ ಇದೆ.

ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಘಟನೆಯಿಂದ ಎಂ.ಜಿ. ರಸ್ತೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಈಗ ಸಂಚಾರವನ್ನು ಸುಗಮಗೊಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement