ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವರದಕ್ಷಿಣೆ ಕಾನೂನು ದುರುಪಯೋಗಕ್ಕೆ ಸುಪ್ರೀಂ ಕಿಡಿ

Vishwanath S
Updated On : 3 Jul 2014, 4:38 am

ನವದೆಹಲಿ: ಗೃಹಿಣಿಯರು ವರದಕ್ಷಿಣೆ ಕಾನೂನನ್ನು ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಇತ್ತೀಚಿನ ದಿನಗಳಲ್ಲಿ ಅನೇಕ ಮಹಿಳೆಯರು ವರದಕ್ಷಿಣೆ ಕಿರುಕುಳ ತಡೆ ಕಾನೂನನ್ನು ರಕ್ಷಣಾತ್ಮಕವಾಗಿ ಬಳಸದೇ ಅಸ್ತ್ರವಾಗಿ ಬಳಸುತ್ತಿದ್ದಾರೆಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಂತಹ ಪ್ರಕರಣಗಳು ದೇಶಾದ್ಯಂತ ಹೆಚ್ಚುತ್ತಿರುವುದು ಆರೋಗ್ಯಕರ ಬೆಳವಣಿಗೆಯಲ್ಲ ಎಂದು ನ್ಯಾಯಾಲಯ ಸ್ಪಷ್ಟ ಮಾತುಗಳಲ್ಲಿ ಹೇಳಿದೆ.

ವರದಕ್ಷಿಣೆ ಕಿರುಕುಳ ಆರೋಪದಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498ಎ ಅಡಿಯಲ್ಲಿ ದೂರು ದಾಖಲಿಸ್ಪಟ್ಟ ಮಾತ್ರಕ್ಕೆ ಅಂತಹ ಮಹಿಳೆಯ ಪತಿ ಹಾಗೂ ಪತಿಯ ಕಡೆಯವರನ್ನು ಪೊಲೀಸರು ಬಂಧಿಸುವುದನ್ನು ಸುಪ್ರೀಂಕೋರ್ಟ್ ವಿರೋಧಿಸಿದೆ.

ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಮೊದಲಿಗೆ ಬಂಧಿಸಿ ಆ ಬಳಿಕ ಕಾನೂನು ಸಂಬಂಧ ಕ್ರಮಗಳನ್ನು ಮುಂದುವರೆಸುವುದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಾಲಯ ಹೇಳಿದ್ದು, ಇಂತಹ ಪ್ರವೃತ್ತಿಗಳಿಗೆ ಕಡಿವಾಣ ಹಾಕುವ ಅಗತ್ಯತೆಯಿದೆ ಎಂದು ಪ್ರತಿಪಾದಿಸಿದೆ.

ಈ ಸಂಬಂಧ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸ್ಪಷ್ಟ ಆದೇಶ ನೀಡಿರುವ ನ್ಯಾಯಾಲಯ, ವರದಕ್ಷಿಣೆ ಕಿರುಕುಳ ಸೇರಿದಂತೆ ಯಾವುದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಕೇವಲ ಬಂಧನ ಮಾರ್ಗವನ್ನಷ್ಟೇ ಅವಲಂಬಿಸಬಾರದು ಎಂಬ ನಿರ್ದೇಶನವನ್ನು ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement