ಭದ್ರತಾ ಪಡೆ ಎನ್‌ಕೌಂಟರ್‌ಗೆ ಉಗ್ರ ಬಲಿ
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಶನಿವಾರ ಭದ್ರತಾ...
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಉಗ್ರನೊಬ್ಬ ಮೃತಪಟ್ಟಿದ್ದು, ಯೋಧನೊರ್ವ ಗಾಯಗೊಂಡಿದ್ದಾರೆ.
ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಿಪಾಲ್ ಗ್ರಾಮದ ತ್ರಾಲ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭವಿಸಿದ್ದು, ಈವರೆಗೂ ನಡೆದ ಕಾಳಗದಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಉಗ್ರನ ಮೃತದೇಹ ಹಾಗೂ ಒಂದು ಎ.ಕೆ 47 ರೈಫಲನ್ನು ಭದ್ರತಾ ಪಡೆಗಳು ವಶಕ್ಕೆ ಪಡಿಸಿಕೊಂಡಿವೆ ಎಂದು ಸೇನಾ ವಕ್ತಾರರೊಬ್ಬರು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಭಾರತೀಯ ಯೋಧರೊಬ್ಬರು ಗಾಯಗೊಂಡಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದರು.