ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಲಮಾದಿಯಲ್ಲಿ ಕಾಂಪೌಂಡ್ ಕುಸಿತ: 11 ಕಾರ್ಮಿಕರ ಸಾವು

ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಬಿದ್ದ ಪರಿಣಾಮ 11 ಕಾರ್ಮಿಕರು ಸ್ಥಳದಲ್ಲೇ...

Mainashree
Updated On : 6 Jul 2014, 4:55 am

ತಮಿಳುನಾಡು: ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಬಿದ್ದ ಪರಿಣಾಮ 11 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ.

ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ಅಲಮಾದಿ ಪ್ರದೇಶದಲ್ಲಿ ನಿರ್ಮಾಣ ಹಂತದ ಕಾಂಪೌಂಡ್ ಕುಸಿದು ಬಿದ್ದಿದೆ. ಘಟನೆಯಲ್ಲಿ 11 ಕಾರ್ಮಿಕರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾರೆ.

ಅವಶೇಷಗಳಡಿ 10ಕ್ಕೂ ಹೆಚ್ಚು ಜನ ಸಿಲುಕಿದ್ದು, ಕಾರ್ಯಾಚರಣೆ ಮುಂದುವರೆಸಲಾಗಿದೆ. ಮೃತರೆಲ್ಲರು ಆಂಧ್ರ ಪ್ರದೇಶದ ಕಾರ್ಮಿಕರು ಎಂದು ಮೂಲಗಳು ತಿಳಿಸಿವೆ.

ಕಾಂಪೌಂಡ್ ಕುಸಿತ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರ ತಲಾ 2 ಲಕ್ಷ ಪರಿಹಾರ ಹಾಗೂ ಗಾಯಾಳುವಿಗೆ 50 ಸಾವಿರ ಪರಿಹಾರ ಘೋಷಣೆ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಇಬ್ಬರನ್ನು ಬಂಧಿಸಲಾಗಿದ್ದು, ಪೆಪ್ಸಿ ಕಂಪನಿಯ ಗುತ್ತಿಗೆದಾರ ರಾಮ್‌ನಾಥನ್, ಹಾಗೂ ಗೋದಾಮು ಮಾಲೀಕ ಬಾಲ ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೊಂದೆಡೆ ಆಂಧ್ರದಿಂದ ಕೂಲಿ ಕಾರ್ಮಿಕರನ್ನು ಕರೆ ತಂದಿದ್ದ ಮೋಹನ್ ಎಂಬಾತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement