ಗುತ್ತಿಗೆ ಪೌರಕಾರ್ಮಿಕರ ಖಾಯಂಗೊಳಿಸುವಂತೆ ಆಗ್ರಹ
ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಗುತ್ತಿಗೆ ಪೌರ ಕಾರ್ಮಿಕ ಸಂಘದ ಸಂಘಟನೆ ಆಗ್ರಹಿಸಿದೆ.
ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಕಾರ್ಯದರ್ಶಿ ಎನ್.ನಾಗರಾಜ್ ಅವರು, ಬಿಬಿಎಂಪಿ ರೋಸ್ಟರ್ ಪದ್ದತಿ ಮುಖಾಂತರ ಬಿಬಿಎಂಪಿ 4000 ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಇದರಿಂದ ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಬೀದಿಗೆ ಬೀಳುತ್ತಾರೆ. ಹೀಗಾಗಿ ಈ ಕೂಡಲೇ ರೋಸ್ಟರ್ ಪದ್ದತಿಯನ್ನು ರದ್ದುಗೊಳಿಸಿ, ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ ಈ ಕುರಿತು ಒಂದು ದಿನದ ಸಾಂಕೇತಿಕ ಧರಣಿ ಕೂಡ ನಡೆಸಲಾಗುತ್ತಿದ್ದು, ಇದೇ ಜುಲೈ 9 ಬುಧವಾರದಂದು ಬಿಬಿಎಂಪಿ ಕೇಂದ್ರ ಕಚೇರಿಯ ಮುಂಭಾಗದಲ್ಲಿ ಧರಣಿ ಹಮ್ಮಿಕೊಂಡಿದ್ದೇವೆ ಎಂದು ನಾಗರಾಜ್ ತಿಳಿಸಿದ್ದಾರೆ.